ಎಸ್‌ಸಿಡಿಸಿಸಿ ಬ್ಯಾಂಕ್ ದರ್ಬೆ ಶಾಖೆಯಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಾಗಾರ

0

ಪುತ್ತೂರು:ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ದರ್ಬೆ ಶಾಖೆಯಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಾಗಾರವು ಜ.4ರಂದು ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ದರ್ಬೆ ಶ್ರೀರಾಮ ಸೌಧದ ಮ್ಹಾಲಕರು, ಕನ್ನಡ ಸಾಹಿತ್ಯ ಪರಿಷತ್‌ನ ಪುತ್ತೂರು ಘಟಕದ ಅಧ್ಯಕ್ಷರಾಗಿರುವ ಉಮೇಶ್ ನಾಯಕ್ ಮಾತನಾಡಿ, ದರ್ಬೆ ಶಾಖೆಯಲ್ಲಿ ಗ್ರಾಹಕರಿಗೆ ಉತ್ತಮ ರೀತಿಯ ಸೇವೆ ದೊರೆಯುತ್ತಿದೆ. ಸಿಬಂದಿಗಳು ಗ್ರಾಹಕರೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸುತ್ತಿದ್ದಾರೆ. ಶಾಖೆಯ ಮೂಲಕ ನಗರ ಪ್ರದೇಶದ ಜನರಿಗೆ ಸಾಕಷ್ಟು ಅನುಕೂಲಕರವಾಗಿದ್ದು ಶಾಖೆಯು ನಾಲ್ಕು ವರ್ಷಗಳಲ್ಲಿ ಉತ್ತಮ ಅಭಿವೃದ್ಧಿ ಹೊಂದಿದೆ ಎಂದರು.


ಸಂಪನ್ಮೂಲ ವ್ಯಕ್ತಿಯಾಗುದ್ದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಎಂ. ಗೋಪಾಲಕೃಷ್ಣ ಭಟ್ ಮಾತನಾಡಿ, ಬ್ಯಾಂಕ್‌ನಿಂದ ದೊರೆಯುವ ಸೌಲಭ್ಯಗಳು, ಸರಕಾರ ಯೋಜನೆಗಳು, ಸಾಲಗಳು, ಡಿಜಿಟಲ್ ವ್ಯವಹಾರದ ಸಾಧಕ-ಬಾದಕಗಳು, ಠೇವಣಿ ಹಾಗೂ ವಿಮೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನರಿಮೊಗರು ಪ್ರಾಥಮಿಕ ಕೃಷಿ ಪತ್ತನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಧುಕರ್ ಎಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಖಾ ವ್ಯವಸ್ಥಾಪಕ ಕೇಶವ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬಂದಿ ದಿವ್ಯಲಕ್ಷ್ಮೀ ಸ್ವಾಗತಿಸಿದರು. ವಿಘ್ನೇಶ್ ವಂದಿಸಿದರು. ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬಂದಿ ಉಮೇಶ್ ಎಸ್.ಕೆ ಸಂಪ್ಯ ಕಾರ್ಯಕ್ರಮ ನಿರೂಪಿಸಿದರು.

ನವೋದಯ ಸ್ವಸಹಾಯ ಸಂಘದ ಮೇಲ್ವಿಚಾರಕ ಚಂದ್ರಶೇಖರ, ಪ್ರೇರಕಿಯರಾದ ಕುಸುಮಾವತಿ, ಮೋಹಿನಿ ಹಾಗೂ ಬ್ಯಾಂಕ್‌ನ ಗ್ರಾಹಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here