ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರಿನಿಂದ ೮ ಕಿ.ಮೀ ದೂರದ ಪರ್ಪುಂಜದಲ್ಲಿರುವ ರಾಮಜಾಲು ಶ್ರೀ ಬ್ರಹ್ಮಬೈದೆರ್ಕಳ ಗರಡಿಗೆ ತನ್ನದೇ ಆದ ಇತಿಹಾಸವಿದೆ.
ಶಾಸಕ ಸಂಜೀವ ಮಠಂದೂರು ಭೇಟಿ, ಪ್ರಸಾದ ಸ್ವೀಕಾರ
ಪುತ್ತೂರು ಶಾಸಕ ಸಂಜೀವ ಮಠಂದೂರುರವರು ರಾಮಜಾಲು ಶ್ರೀ ಕ್ಷೇತ್ರಕ್ಕೆ ಮಧ್ಯಾಹ್ನ ಭೇಟಿ ನೀಡಿದರು. ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಶಾಸಕರನ್ನು ಬರಮಾಡಿಕೊಂಡರು. ಮಧ್ಯಾಹ್ನ ನಡೆದ ಮಹಾಪೂಜೆಯಲ್ಲಿ ಪಾಲ್ಗೊಂಡ ಶಾಸಕರು ಶ್ರೀ ಬೈದೇರ್ಕಳ ಪ್ರಸಾದ ಸ್ವೀಕರಿಸಿದರು. ಸಂಜೀವ ಪೂಜಾರಿ ಕೂರೇಲುರವರು ಪ್ರಸಾದ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶಾಸಕರ ಜೊತೆಯಲ್ಲಿ ತಾಪಂ ಮಾಜಿ ಸದಸ್ಯ ಸಾಜ ರಾಧಾಕೃಷ್ಣ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
ಇಂದು ರಾತ್ರಿ ಶಿವಧೂತ ಗುಳಿಗೆ
ಜ.೭ ರಂದು ಸಂಜೆ ಭಂಡಾರ ತೆಗೆಯುವ ಕಾರ್ಯಕ್ರಮ ನಡೆದ ಬಳಿಕ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಮನರಂಜನ ಕಾರ್ಯಕ್ರಮಗಳು ನಡೆಯಲಿದೆ ಬಳಿಕ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರಧಾನ, ಪ್ರತಿಭಾ ಪುರಸ್ಕಾರ ಬಳಿಕ ಶ್ರೀ ಬೈದೆರ್ಕಳ ಗರಡಿ ಇಳಿಯುವ ಕಾರ್ಯಕ್ರಮ ನಡೆದು ರಾತ್ರಿ ೧ ರಿಂದ ವಿಜಯ ಕುಮಾರ್ ಕೋಡಿಯಾಲ್‌ಬೈಲ್ ನಿರ್ದೇಶನದ ವಿಭಿನ್ನ ಶೈಲಿಯ ತುಳು ನಾಟಕ ` ಶಿವಧೂತ ಗುಳಿಗೆ’ ಪ್ರದರ್ಶನಗೊಳ್ಳಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೇಮೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೈವ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ರಾಮಜಾಲು ಕ್ಷೇತ್ರದ ಪ್ರಕಟಣೆ ತಿಳಿಸಿದೆ.