Saturday, February 4, 2023
Homeಗ್ರಾಮವಾರು ಸುದ್ದಿಕುಂಜಾರು ಮದಗ ಜನಾರ್ದನ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

ಕುಂಜಾರು ಮದಗ ಜನಾರ್ದನ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

ಪುತ್ತೂರು:ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವಗಳು ಜ.೭ರಂದು ನಡೆಯಿತು.


ದೇವಸ್ಥಾನದಲ್ಲಿ ಬೆಳೀಗ್ಗೆ ಪ್ರತಿಷ್ಠಾ ವರ್ಧಂತಿ ಹಾಗೂ ಲೋಕಕಲ್ಯಾಣಾರ್ಥವಾಗಿ ತುಳಸಿ ಅರ್ಚನೆ ಹಾಗೂ ಸೀಯಾಳ ಅಭಿಷೇಕ ನಡೆಯಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹಲವ, ಕಲಶ ಪ್ರತಿಷ್ಠೆ, ಕಲಶಾಭಿಷೇಕ, ವಿಜಯಕುಮಾರಿ ಶೆಣೈ ರಾಮನಗರ ಮತ್ತು ಬಳಗದವರಿಂದ ವಿಷ್ಣುಸಹಸ್ರನಾಮ ಮತ್ತು ದೇವರ ನಾಮ ಸ್ಮರಣೆ, ಮಧ್ಯಾಹ್ನ ತುಲಾಭಾರ ಸೇವೆ ಬಳಿಕ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.


ಇಂದಿನಿಂದ ಜಾತ್ರೋತ್ಸವ, ನಾಳೆ ದರ್ಶನ ಬಲಿ, ರಥೋತ್ಸವ:
ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಜ.೮ರಂದು ಸಂಜೆ ಭಜನೆ, ಚೆಂಡೆ ಸೇವೆ, ಮಹಾಪೂಜೆ, ದೇವರ ಬಲಿ ಹೊರಟು ಉತ್ಸವ ಹಾಗೂ ಕಟ್ಟೆಪೂಜೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಸ್ಥಳೀಯ ಗ್ರಾಮಸ್ಥರಿಂದ ವಿವಿಧ ವಿನೋದಾವಳಿಗಳು ನಡೆಯಲಿದೆ. ಜ.೯ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ನವಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಚೆಂಡೆ ಸೇವೆ, ಶ್ರೀ ದೇವರ ಬಲಿ ಹೊರಟು ಉತ್ಸವ ಕಟ್ಟೆಪೂಜೆ, ಶ್ರೀ ಮನ್ಮಹಾರಥೋತ್ಸವ ನಡೆದ ಬಳಿಕ ಕ್ಷೇತ್ರದ ದೈವಗಳ ಭಂಡಾರ ತೆಗೆದು ಹುಲಿಭೂತ, ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ. ಸಾಂಸ್ಕೃತಕ ಕಾರ್ಯಕ್ರಮದಲ್ಲಿ ರಾತ್ರಿ ಪುತ್ತೂರು ಕಲಾವಿದರು ಅರ್ಪಿಸುವ `ರಡ್ಡೆಟ್ ಒಂಜಿ’ ಎಂಬ ಸಾಂಸಾರಿಕ ನಾಟಕ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Must Read

spot_img
error: Content is protected !!