ಮಂಗಳೂರು ಲೋಕಾಯುಕ್ತ ಎಸ್‌ಪಿಯಾಗಿ ಕಡಬ ಮೂಲದ ಸೈಮನ್ ಸಿಎ ನಿಯುಕ್ತಿ

0

ಪುತ್ತೂರು:ದ.ಕ.ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡ ಮಂಗಳೂರು ಲೋಕಾಯುಕ್ತ ಎಸ್‌ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ.ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ.ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿದ್ದ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರು ನಗರ ಲೋಕಾಯುಕ್ತ ಪ್ರಧಾನ ಕಚೇರಿಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ದ.ಕ.,ಉಡುಪಿ,ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿದಂತೆ 4 ಜಿಲ್ಲೆಗಳನ್ನೊಳಗೊಂಡ ಭ್ರಷ್ಟಾಚಾರ ನಿಗ್ರಹದಳದ ಪಶ್ಚಿಮ ವಲಯ ಪೊಲೀಸ್ ವರಿಷ್ಠಾಽಕಾರಿಯಾಗಿ ನೇಮಕಗೊಂಡಿದ್ದ ಸೈಮನ್ ಅವರು ಎಸಿಬಿ ರದ್ದಾದ ಬಳಿಕ ಮತ್ತೆ ಲೋಕಾಯುಕ್ತಕ್ಕೆ ಮರುನಿಯುಕ್ತಿಗೊಂಡಿದ್ದರು.ಮೂಲತ: ಕಡಬ ಹಳೆಸ್ಟೇಷನ್ ನಿವಾಸಿಯಾಗಿರುವ ಸೈಮನ್‌ರವರು ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದಾರೆ.ಉಪ್ಪಿನಂಗಡಿಯಲ್ಲಿ ತನ್ನ ವ್ಯಾಸಂಗವನ್ನು ಆರಂಭಿಸಿದ್ದ ಸೈಮನ್‌ರವರು ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪದವಿ ಪೂರೈಸಿ ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲ ವೃತ್ತಿ ಆರಂಭಿಸಿದ್ದರು.
2002ರಲ್ಲಿ ರಾಜ್ಯ ಸಿಐಡಿ ವಿಭಾಗದ ಸಬ್ ಇನ್ಸ್ಪೆಕ್ಟರ್ ಆಗಿ ಪೊಲೀಸ್ ಸೇವೆ ಆರಂಭಿಸಿ ಬಳಿಕ ಪದೋನ್ನತಿಗೊಂಡು ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.ಬಳಿಕ ಡಿವೈಎಸ್ಪಿಯಾಗಿ ಭಡ್ತಿಹೊಂದಿ 2011ರಲ್ಲಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದರು.2020ರಲ್ಲಿ ಎಸ್ಪಿಯಾಗಿ ಪದೋನ್ನತಿಗೊಂಡಿದ್ದರು.ಎಸಿಬಿ ಪಶ್ಚಿಮ ವಲಯದ ಎಸ್ಪಿಯಾಗಿ 2021 ಆಗಸ್ಟ್ 2ರಂದು ಅಧಿಕಾರ ವಹಿಸಿಕೊಂಡಿದ್ದರು.ಹೈಕೋರ್ಟ್ ಆದೇಶದಂತೆ ಸರಕಾರ ಎಸಿಬಿಯನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಮರು ಅಽಕಾರ ಸ್ಥಾಪಿಸಿತ್ತು.ಸೈಮನ್ ಅವರು ಪ್ರಸ್ತುತ ಲೋಕಾಯುಕ್ತ ಬೆಂಗಳೂರು ಪ್ರಧಾನ ಕಚೇರಿಯಲ್ಲಿ ಎಸ್ಪಿಯಾಗಿ ಕರ್ತವ್ಯದಲ್ಲಿದ್ದಾರೆ.ಜ.12ರಂದು ಅವರು ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಅಽಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಅವರ ತಂದೆ ಸಿ.ಪಿ.ಅಬ್ರಹಾಂ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here