ಕುಂಜೂರುಪಂಜ :ಆರೋಗ್ಯ ಉಚಿತ ತಪಾಸಣಾ ಕಾರ್ಯಕ್ರಮ ಹಾಗೂ ಕಣ್ಣಿನ ಉಚಿತ ಪರೀಕ್ಷೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕುಂಜೂರುಪಂಜ, ಜನಜಾಗೃತಿ ವೇದಿಕೆ ಬಲ್ನಾಡು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು, ಪುತ್ತೂರು ರೋಟರ್ಯಾಕ್ಟ್ ಕ್ಲಬ್, ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಕಾರ್ಯಕ್ರಮ ಹಾಗೂ ಕಣ್ಣಿನ ಉಚಿತ ಪರೀಕ್ಷೆ ಜ. 8 ರಂದು ಕುಂಜೂರುಪಂಜ ಮಂಜುನಾಥ ಸಭಾಭವನದಲ್ಲಿ ಜರಗಿತು.


ಕಾರ್ಯಕ್ರಮ ಉದ್ಘಾಟಿಸಿದ ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಮಾತನಾಡಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಆನಂದ ಕೆ. ಮಾತನಾಡಿ, ಯೋಜನೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿವೆ. ಆರ್ಥಿಕ ಸ್ವಾವಲಂಭಿ ಆಗುವುದರ ಜೊತೆಗೆ, ಶಿಬಿರಗಳಂತಹ ಕಾರ್ಯಕ್ರಮಗಳನ್ನು ಯೋಜನೆಯಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ಮಾತನಾಡಿ, ರೋಗ ಬಂದ ನಂತರ ಚಿಕಿತ್ಸೆ ಪಡೆದುಕೊಳ್ಳುವುದಕ್ಕಿಂತ, ಮೊದಲೇ ಎಚ್ಚೆತ್ತುಕೊಳ್ಳುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಶಿಬಿರವನ್ನು ಆಯೋಜಿಸಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.

ಕುಂಜೂರುಪಂಜ ಪ್ರಗತಿ ಬಂಧ ಒಕ್ಕೂಟದ ಅಧ್ಯಕ್ಷ ಮಹಾಲಿಂಗ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಯೋಧೆ ಶಕುಂತಲ ದೇವಸ್ಯ, ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಮೂಳೆ ತಜ್ಞ ಡಾ. ಆದರ್ಶ, ಇಎನ್ಟಿ ತಜ್ಞೆ ಡಾ. ಪ್ರಿಯಾಂಕ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಹರೀಶ್ ಸ್ವಾಗತಿಸಿ, ಜೆವಿಕೆ ಸಮನ್ವಯಾಧಿಕಾರಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಗಣೇಶ್ ಎನ್. ಕಲ್ಲರ್ಪೆ ವಂದಿಸಿದರು.

ಬಳಿಕ ಬಿಪಿ, ಶುಗರ್, ಕಣ್ಣಿನ ಪರೀಕ್ಷೆ, ಕಿವಿ, ಮೂಗು, ಗಂಟಲು, ಇಸಿಜಿ ಗಂಟುನೋವು ಇವುಗಳ ಜೊತೆಗೆ ಉಚಿತವಾಗಿ ಕಣ್ಣಿನ ಪರೀಕ್ಷೆಯನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here