ಕೋಲಾರ: ಮುಂಬರುವ ವಿಧಾನಸಭಾ ಚುಣಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ ಎಂದು ಕಾಂಗ್ರೇಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಕೋಲಾರದ ಮಿನಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೇಸ್ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ನಾನು ಕೋಲಾರದಿಂದ ಸ್ಪರ್ಧಿಸಲು ತೀರ್ಮಾನ ಮಾಡಿದ್ದೇನೆ. ಆದರೆ ನನ್ನ ನಿರ್ಧಾರ ಹೈಕಮಾಂಡ್ ಒಪ್ಪಿಗೆಯನ್ನು ಅವಲಂಬಿಸಿದೆ ಎಂದವರು ಹೇಳಿದ್ದಾರೆ.