ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ಮಂಗಳೂರು ವಿಭಾಗದ 2023ನೇ ಸಾಲಿನ ದಿನಚರಿ ಬಿಡುಗಡೆ, ನಿವೃತ್ತ ನೌಕರರಿಗೆ ಸನ್ಮಾನ

0

ಪುತ್ತೂರು: ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಬೆಂಗಳೂರು ಇದರ ಮಂಗಳೂರು ವಿಭಾಗದ 2023ನೇ ಸಾಲಿನ ದಿನಚರಿ ಬಿಡುಗಡೆ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಜ.7ರಂದು ಪುತ್ತೂರು ತಾಲೂಕು ಶಾಖೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಿತು.

ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ವೈ.ಕೆ. ಉದ್ಘಾಟಿಸಿ ಶುಭಹಾರೈಸಿದರು. ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ಮಂಗಳೂರು ವಿಭಾಗದ ಅಧ್ಯಕ್ಷ ಚಿದಾನಂದ ಬನಾರಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ.ಕಾರ್ಯಪ್ಪ, ಸುಬ್ರಹ್ಮಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್‌ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಬಿ.ಎಂ.ಕಿರಣ್, ಮಂಜುನಾಥ, ತ್ಯಾಗರಾಜ್, ಜಯಪ್ರಕಾಶ್, ಪುತ್ತೂರು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವೃತ್ತದ ಅಧ್ಯಕ್ಷ ಜಗದೀಶ್ ಕೆ.ಎನ್., ಪುತ್ತೂರು ತಾಲೂಕು ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಕೆ.,ರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ಸನ್ಮಾನ:

ಅರಣ್ಯ ರಕ್ಷಕ ಪದನಾಮವನ್ನು ಗಸ್ತು ಅರಣ್ಯ ಪಾಲಕ ಪದನಾಮವಾಗಿ ಬದಲಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕ ಮತ್ತು ಅರಣ್ಯ ವೀಕ್ಷಕ ಸಂಘ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರಾಜು ಲಿಂಬು ಚವ್ಹಾಣ್ ಹಾಗೂ ಮಂಗಳೂರು ವಿಭಾಗದಲ್ಲಿ ಅಂತರ್‌ರಾಜ್ಯ ರಕ್ತಚಂದನ ಸಾಗಾಟ ಹಾಗೂ ಆನೆದಂತ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ. ಹಾಗೂ ಸುಧೀರ್ ಹೆಗ್ಡೆಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಿವೃತ್ತ ನೌಕರರಾದ ಚೆನ್ನಪ್ಪ ಡಿ., ಕಮಲಾಕ್ಷ ಶೆಟ್ಟಿ ಹಾಗೂ ದಿನೇಶ್ ಎಸ್.ರವರನ್ನು ಸನ್ಮಾನಿಸಲಾಯಿತು.

ಮಂಗಳೂರು ವಿಭಾಗದ ಸದಸ್ಯರಿಗೆ ಸಂಘದ ವತಿಯಿಂದ ಹಂಟರ್ ಶೂ (ಬೇಟಗಾರ ಬೂಟು) ಸಾಂಕೇತಿಕವಾಗಿ ವಿತರಿಸಲಾಯಿತು. ಸಂಘದ ಕಾರ್ಯದರ್ಶಿ ಭರಮಪ್ಪ ಹೆಚ್ ಬೆಳಗಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ್ ಕೆ.ಎನ್.ಸ್ವಾಗತಿಸಿ, ಪ್ರಶಾಂತ್ ಮಾಳಗಿ ವಂದಿಸಿದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here