ಯು ಪಿ :ಕಾನ್ಪುರದಲ್ಲಿ ಕಳೆದ ಒಂದು ವಾರದಲ್ಲಿ ಸುಮಾರು 98 ಮಂದಿ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್ಸ್ಟಿಟ್ಯೂಟ್ ಅಫ್ ಕಾರ್ಡಿಯಾಲಜಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಒಂದು ವಾರದಲ್ಲಿ 723 ಹೃದ್ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರು.
ಈ ಪೈಕಿ 98 ಜನರು ಮೃತಪಟ್ಟಿದ್ದಾರೆ. ಇವರಲ್ಲಿ 44 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು,54 ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಮೊದಲೇ ಮೃತಪಟ್ಟಿದ್ದಾರೆ ಎಂದು ಸಿಂಘಾನಿಯಾ ಆಸ್ಪತ್ರೆ ವೈದ್ಯಧಿಕಾರಿಗಳು ತಿಳಿಸಿದ್ದಾರೆ.