ಕಾಣಿಯೂರು: ಪಕ್ಷ ಬೂತ್ ಸಂಘಟನೆಗೆ ಬಲತುಂಬುವ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬೂತ್ ವಿಜಯ್ ಅಭಿಯಾನಕ್ಕೆ ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಕಾಣಿಯೂರು ಶಕ್ತಿ ಕೇಂದ್ರದ ಚಾರ್ವಾಕ ಬೂತ್ ನಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವಿಶ್ವನಾಥ ದೇವಿನಗರ, ಹಿರಿಯ ಕಾರ್ಯಕರ್ತ ಬೆಳಿಯಪ್ಪ ಗೌಡ ದೇವರತ್ತಿಮಾರ್, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ರಾಮಣ್ಣ ಗೌಡ ಪೊನ್ನೆತ್ತಡಿ, ಗಂಗಾಧರ್ ಕೋಡಂದೂರು, ಮಾಧವ ಕಜೆ, ಕುಸುಮಾಧರ್, ಕುಸುಮಾಧರ್ ಬೀರೊಳಿಗೆ ಮತ್ತಿತರರು ಉಪಸ್ಥಿತರಿದ್ದರು.