ಪಶ್ಚಿಮಬಂಗಾಳ: ಪಶ್ಚಿಮಬಂಗಾಳದ ಬಿರ್ಬೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ಬಳಿಕ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಬೇಳೆ ತುಂಬಿದ ಕಂಟೈನರ್ನಲ್ಲಿ ಹಾವು ಕಂಡುಬಂದಿತ್ತು ಎಂದು ಭೋಜನ ತಯಾರಿಸುವ ಶಾಲೆಯ ಸಿಬ್ಬಂದಿ ಹೇಳಿದ್ದಾರೆ. ಊಟದ ನಂತರ ಮಕ್ಕಳು ವಾಂತಿ ಮಾಡಲು ಆರಂಭಿಸಿದ್ದು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ. ಓರ್ವ ವಿದ್ಯಾರ್ಥಿಯನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.