ಜ.13: ರಾಮಕುಂಜಕ್ಕೆ ಚಕ್ರವರ್ತಿ ಸೂಲಿಬೆಲೆ

0

ರಾಮಕುಂಜ: ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ ಅವರು ಜ.13ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ ಆಗಮಿಸಲಿದ್ದಾರೆ.

ಅವರು ಜ.13ರಂದು ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ’ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ಕೆ.ಎಸ್.ರಾಧಾಕೃಷ್ಣ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here