ತಾಲೂಕು ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಘದ ತುರ್ತುಸಭೆ

0

ಜ.18ರಿಂದ ಬೆಂಗಳೂರಿನಲ್ಲಿ ನಡೆಯುವ ಮುಷ್ಕರದಲ್ಲಿ ಅಂಗನವಾಡಿ ಬಂದ್ ಮಾಡಿ ಭಾಗವಹಿಸಲು ನಿರ್ಧಾರ

ಪುತ್ತೂರು: ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ತುರ್ತುಸಭೆ ಸಂಘದ ಅಧ್ಯಕ್ಷೆ ಕಮಲ ಮಾವಿನಕಟ್ಟೆರವರ ಅಧ್ಯಕ್ಷತೆಯಲ್ಲಿ ಜ.9ರಂದು ನೆಲ್ಲಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ವತಿಯಿಂದ ಜ.18ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಭಾಗವಹಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ತುರ್ತುಸಭೆಯಲ್ಲಿ ರಾಜ್ಯ ಪ್ರತಿನಿಧಿ ಅರುಣಾ ಬೀರಿಗ, ತಾಲೂಕು ಸಂಘದ ಮಾಜಿ ಅಧ್ಯಕ್ಷರುಗಳಾದ ಶ್ರೀಲತಾ ರಾವ್, ಕವಿತಾ ಜಯನ್, ಮೀನಾಕ್ಷಿ, ತಾರಾ ಜೆ. ಬಲ್ಲಾಳ್, ಮಾಜಿ ಕಾರ್ಯದರ್ಶಿ ಶಶಿಕಲಾ, ಜತೆ ಕಾರ್ಯದರ್ಶಿ ತೀರ್ಥಕುಮಾರಿ ಹಾಗೂ ಎಲ್ಲಾ ವಲಯದ ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯದರ್ಶಿ ಪುಷ್ಪಲತಾ ಸ್ವಾಗತಿಸಿ ಖಜಾಂಜಿ ಶೈಲಜಾ ಈಶ್ವರಮಂಗಲ ವಂದಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಅಂಗನವಾಡಿಗಳಲ್ಲಿ ಜಾರಿ ಮಾಡುವುದು, ಶಾಲಾ ಶಿಕ್ಷಕರ ಸ್ಥಾನಮಾನ ನೀಡುವುದು, ಸುಪ್ರೀಂ ಕೋರ್ಟ್‌ನ ಆದೇಶದಂತೆ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡುವುದು. ಇಎಸ್‌ಐ ಆರೋಗ್ಯ ವಿಮೆ ಜಾರಿಗೊಳಿಸುವುದು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.

LEAVE A REPLY

Please enter your comment!
Please enter your name here