ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ; ರಾಮಕುಂಜ ಆ.ಮಾ.ಶಾಲಾ ವಿದ್ಯಾರ್ಥಿನಿಗೆ ಅದ್ದೂರಿ ಸ್ವಾಗತ, ಮೆರವಣಿಗೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜ.7ರಂದು ಶಿವಮೊಗ್ಗ ಡಿ.ವಿ.ಎಸ್. ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಪ್ರಜ್ಞಾರವರನ್ನು ಆತೂರು ಜಂಕ್ಷನ್‌ನಿಂದ ಶಾಲಾ ವಠಾರದವರೆಗೆ ಅದ್ದೂರಿಯ ಮೆರವಣಿಗೆಯೊಂದಿಗೆ ಜ.10ರಂದು ಶಾಲೆಗೆ ಕರೆತರಲಾಯಿತು.


ವಿದ್ಯಾರ್ಥಿನಿಗೆ ಹೂ ಹಾರ, ಶಾಲು, ಪೇಟ ತೊಡಿಸಿ ಅದ್ದೂರಿಯ ಮೆರವಣಿಗೆಯ ಮೂಲಕ ಸ್ವಾಗತಿಸಿ ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ, ರಾಮಕುಂಜ ಗ್ರಾ.ಪಂ. ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ., ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಮಾಲತಿ ಕೇಶವ್, ಪ್ರಶಸ್ತಿ ವಿಜೇತ ವಿದ್ಯಾರ್ಥಿನಿಯ ಹೆತ್ತವರು, ಕುಟುಂಬಸ್ಥರು ಹಾಗೂ ಸಂಸ್ಥೆಯ ಮುಖ್ಯಗುರುಗಳು, ಶಿಕ್ಷಕ-ಶಿಕ್ಷಕೇತರ ವೃಂದದವರು ಪಾಲ್ಗೊಂಡಿದ್ದರು. ತದನಂತರ ಸಂಸ್ಥೆಯಲ್ಲಿ ಸಂಸ್ಥೆಯ ಕಾರ‍್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿನಿಯು ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು. ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ ಮಾತನಾಡಿ, ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸಂಸ್ಥೆಯ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ಪಸರಿಸಿರುವುದಕ್ಕೆ ವಿದ್ಯಾರ್ಥಿನಿ ಪ್ರಜ್ಞಾಗೆ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಮುಖ್ಯಗುರು ಗಾಯತ್ರಿ ಯು.ಎನ್ ಸ್ವಾಗತಿಸಿದರು. ಸಹಶಿಕ್ಷಕ ಸುಬ್ರಮಣ್ಯ ಸಿ.ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here