ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್ ಕುಸಿದು ತಾಯಿ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಬಿಎಂಆರ್ಸಿಎಲ್ ಮುಖ್ಯ ಇಂಜಿನಿಯರ್ ಸೇರಿದಂತೆ ಎಲ್ಲಾ ಇಂಜಿನಿಯರ್ಗಳನ್ನು ಅಮಾನತು ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದಾರೆ. ಬಿಎಂಆರ್ಸಿಎಲ್ನ ಹಿರಿಯ ಅಧಿಕಾರಿಗಳ ಜೊತೆಗಿನ ಸಭೆಯ ಬಳಿಕ ಹಿರಿಯ ಅಧಿಕಾರಿಗಳಿಗೆ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಹಾಗೆಯೇ ಅಮಾನತಿಗೂ ಸೂಚಿಸಿದ್ದೇನೆ. ಅಲ್ಲದೇ ಕಾಂಟ್ರಾಕ್ಟಿಂಗ್ ಕಂಪೆನಿಯವರ ವಿರುದ್ಧವೂ ಕೇಸು ದಾಖಲಿಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಈ ನಡುವೆ ಮೃತ ಕುಟುಂಬಕ್ಕೆ ರಾಜ್ಯ ಸರಕಾರದ ವತಿಯಿಂದ 20 ಲಕ್ಷ ಮತ್ತು ಬಿಎಂಆರ್ಸಿಎಲ್ ವತಿಯಿಂದ 20ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.