ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಯುವ ಜನ ದಿನವನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಯೋಗ ಸಂಯೋಜಕ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿವೇಕಾನಂದರ ಜೀವನ ಸಾರಗಳನ್ನು, ಅವುಗಳನ್ನು ನಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕೆಂಬುದನ್ನು ತಿಳಿಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲ ಕೆ ಶಾಮಣ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಧನ್ವ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸಂಸ್ಥೆಯ ವಿದ್ಯಾರ್ಥಿನಿಯರು ಸಮೂಹ ಗೀತೆಯನ್ನು ಹಾಡಿದರು. ಶಿಕ್ಷಕಿ ಸೌಮ್ಯ ಎ ಸ್ವಾಗತಿಸಿ, ಅಕ್ಷತಾ ಕೆ ವಂದಿಸಿದರು. ವಿದ್ಯಾರ್ಥಿನಿಯರಾದ ಅನನ್ಯ ಮತ್ತು ರಚಿತಾ ಕಾರ್ಯಕ್ರಮವನ್ನು ನಿರೂಪಿಸಿದರು.