ಪುತ್ತೂರು : ” ಭಾರತದ ಹಿರಿಮೆ- ಗರಿಮೆಯನ್ನು ಜಗತ್ತಿನಾತ್ಯಂತ ಸಾರಿದ ಸ್ವಾಮಿ ವಿವೇಕಾನಂದರ ಜನುಮ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲು ರಾಷ್ಟ್ರದಾತ್ಯಂತ ಕರೆಕೊಟ್ಟಿರುವ ಹಿನ್ನೆಲೆಯನ್ನು ವಿದ್ಯಾರ್ಥಿ ದಿಶೆಯಿಂದ ನಾವೆಲ್ಲರೂ ತಿಳಿದುಕೊಳ್ಳಬೇಕಾಗಿದೆ” – ಎಂದು ವಿವೇಕಾನಂದ ಪದವಿ ಕಾಲೇಜು ತೃತೀಯ ಬಿಎ ವಿದ್ಯಾರ್ಥಿ ಹರಿಪ್ರಸಾದ್ ಹೇಳಿದರು.
ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿವೇಕಾನಂದ ಜಯಂತಿಗೆ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಜ.12ರಂದು ಮಾತನಾಡಿದರು.
ಸಭಾಧ್ಯಕ್ಷತೆ ವಹಿಸಿದ ಪುತ್ತೂರಿನ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನಿರ್ದೇಶಕರಾದ ವಿದ್ವಾನ್ ಡಾ| ದೀಪಕ್ ಕುಮಾರ್ ಭಾರತೀಯ ಶ್ರೇಷ್ಠತೆಯಲ್ಲಿ ಕಲಾಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕಾದ ಅಗತ್ಯತೆಯನ್ನು ತಿಳಿಸಿದರು. ವ್ಯಕ್ತಿ ಕೌಶಲವನ್ನು ವಿಸ್ತಾರಗೊಳಿಸುವಲ್ಲಿ ವಿದ್ಯಾರ್ಥಿ ದಿಶೆಯಿಂದಲೇ ನಾವು ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವೇಕ ಜಯಂತಿಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು. ವೇದಿಕೆಯಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಯಾದ ಲಲಿತ, ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ನಳಿನಿ ವಾಗ್ಲೆ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮವನ್ನು ಗೀತಾ ನಿರೂಪಿಸಿ, ಮುಖ್ಯ ಗುರುಗಳಾದನಳಿನಿ ವಾಗ್ಲೆ ಸ್ವಾಗತಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ಪೋಷಕವೃಂದವರು ಉಪಸ್ಥಿತರಿದ್ದರು.