ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ-ಚಾಲಕ ಸಾವು

0

ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (53) ಎಂಬವರು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ.

ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಗುರುವಾರದಂದು ಬೆಂಗಳೂರಿನಿಂದ ಮಂಗಳೂರಿನತ್ತ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪಿಸುತ್ತಿದ್ದಂತೆಯೇ ಹೃದಯಾಘಾತಕ್ಕೀಡಾದರು. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರಾದರೂ ಆಸ್ಪತ್ರೆಯಲ್ಲಿ ಅವರು ಮೃತ ಪಟ್ಟಿದ್ದಾರೆಂದು ಘೋಷಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿಢೀರ್ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ವಾಹನ ಚಾಲನೆಯ ವೇಳೆಯೇ ಸಾವನ್ನಪ್ಪುವ ವಿದ್ಯಾಮಾನಗಳು ಕಳವಳಕಾರಿಯಾಗಿದೆ.

LEAVE A REPLY

Please enter your comment!
Please enter your name here