ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

0

ಪುತ್ತೂರು, ಜ 13: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ಇದರ ವಿಧಾನಸಭಾ ಕ್ಷೇತ್ರ ಸಮಿತಿಯ ಚುನಾವಣಾ ಪೂರ್ವ ಬಾವಿ ಸಭೆಯು ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಸ್ಫರ್ದಿಸುವ ಮತ್ತು ಅಭ್ಯರ್ಥಿ ಆಯ್ಕೆ ವಿಚಾರದ ಬಗ್ಗೆ ಮಹತ್ವದ ಚರ್ಚೆ ನಡೆಯಿತು.


ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಂದ ಸಂಗ್ರಹಿಸಿದ ಅಭಿಪ್ರಾಯವನ್ನು ವೀಕ್ಷಕ , ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಸಭೆಯ ಮುಂದಿಟ್ಟು , ರಾಜ್ಯ ಸಮಿತಿಯು ಅಭ್ಯರ್ಥಿ ಆಯ್ಕೆ ವಿಚಾರ ಮತ್ತು ಸ್ಫರ್ದಿಸುವ ಬಗ್ಗೆ ಅಂತಿಮ ನಿರ್ಧಾರವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ ಎಂದು ಹೇಳಿದರು.

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು ಧನ್ಯವಾದ ಅರ್ಪಿಸಿದರು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here