ಪುತ್ತೂರು:ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಮುಗಿದು ಉತ್ತರಾಯಣ ಪ್ರವೇಶದ ಪುಣ್ಯಕಾಲ ಮರ ಸಂಕ್ರಮಣದಂದು ರಾತ್ರಿಪೂಜೆ ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ಪೂರ್ವಶಿಷ್ಟ ಪದ್ಧತಿಯಂತೆ ಶ್ರೀ ದೇವರಿಗೆ `ಕನಕಾಭಿಷೇಕ’ವು ವೈಭವದಿಂದ ನಡೆದಿದೆ.
ಸುವಸ್ತುಗಳಿಂದ ಕನಕಾಭಿಷೇಕ:
ಭಂಡಾರದ ವತಿಯಿಂದ ಒಂದು ದೊಡ್ಡ ಹರಿವಾಣದಲ್ಲಿ ಹೊದ್ಲು, ವೀಳ್ಯದೆಲೆ, ಅಡಿಕೆ, ಕಾಳುಮೆಣಸು, ಚಿನ್ನ ಹಾಗೂ ಬೆಳ್ಳಿಯ ತುಣಕುಗಳು ಚಾಲ್ತಿಯಲ್ಲಿರುವ ನಾಣ್ಯಗಳನ್ನು ಓರಣವಾಗಿ ಜೋಡಿಸಿ ದೇವರ ಬಲಿಯ ಕೊನೆಯ ಸುತ್ತಿನಲ್ಲಿ ಉಳ್ಳಾಲ್ತಿ ಅಮ್ಮನವರ ನಡೆಯಲ್ಲಿ ಕನಕಾಭಿಷೇಕ ನೆರವೇರಿಸಲಾಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಕನಕಾಭಿಷೇಕ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮತಿ ಸದಸ್ಯರಾದ ಶೇಖರ್ ನಾರಾವಿ, ರಾಮದಾಸ್ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಬಿ. ಐತ್ತಪ್ಪ ನಾಯ್ಕ, ಡಾ.ಸುಧಾ ಎಸ್ ರಾವ್, ವೀಣಾ ಬಿ.ಕೆ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಸಾವಿರಾರು ಮಂದಿ ಭಕ್ತರು ಉಪಸ್ಥಿತರಿದ್ದರು.ಕನಕಾಭಿಷೇಕದ ಬಳಿಕ ದೇವರ ಬಲಿ ಉತ್ಸವ ಮುಂದೆ ಹೋದ ತಕ್ಷಣ ಅಭಿಷೇಕದ ಪ್ರಸಾದ ರೂಪದಲ್ಲಿನ ಹೊದ್ಲು, ವೀಳ್ಯದೆಲೆ, ಅಡಿಕೆ, ಕಾಳುಮೆಣಸು, ಚಿನ್ನ ಹಾಗೂ ಬೆಳ್ಳಿಯ ತುಣಕುಗಳನ್ನು ಪಡೆಯುವಲ್ಲಿ ಭಕ್ತರು ನಿರತರಾದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ವೈದಿಕ ಕಾರ್ಯಕ್ರಮ ನಿರ್ವಹಿಸಿದರು.