ಶ್ರೀ ನರಹರಿ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳ ರಂಗಪ್ರವೇಶ

0

ನಿತ್ಯ ದೇವಸ್ಥಾನಕ್ಕೆ ಹೋದಾಗ ಕ್ಷೇತ್ರದ ಸಾನಿಧ್ಯ ವೃದ್ಧಿ – ಹರೀಶ್ ಪೂಂಜಾ

ಕಾಣಿಯೂರು: ಹಿಂದೂ ಸಮಾಜಕ್ಕೆ ಪೂರಕವಾಗಿರುವಂತಹ ಶ್ರದ್ಧಾ ಕೇಂದ್ರಗಳು ಹೆಚ್ಚಿನ ರೀತಿಯಲ್ಲಿ ಬೆಳವಣಿಗೆಯಾಗುತ್ತಿದೆ. ದಿನ ನಿತ್ಯ ದೇವಸ್ಥಾನಗಳಿಗೆ ಭಕ್ತರು ಹೋಗುವ ಸಂಕಲ್ಪವನ್ನು ಬ್ರಹ್ಮಕಲಶದ ಸಂದರ್ಭದಲ್ಲಿ ಮಾಡಿಕೊಂಡಾಗ ಕ್ಷೇತ್ರವು ಭಕ್ತರಿಗೆ ಶಕ್ತಿಯನ್ನು ಕೊಡುವುದರ ಮೂಲಕ ಕ್ಷೇತ್ರವು ಬೆಳಗಲು ಸಾಧ್ಯವಿದೆ. ದೇವಸ್ಥಾನದ ನಿತ್ಯ ಸಂಪರ್ಕ ಇದ್ದಾಗ ಕ್ಷೇತ್ರದ ಸಾನಿಧ್ಯ ವೃದ್ಧಿ ಸಾಧ್ಯ ಎಂದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಹೇಳಿದರು.

ಅವರು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಕಾಣಿಯೂರು ಶ್ರೀ ನರಹರಿ ಯಕ್ಷಗಾನ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಶೂರ್ಪನಖಾ ಮಾನಭಂಗ- ಖರದೂಷಣ ವಧೆ ಯಕ್ಷಗಾನ ರಂಗಪ್ರವೇಶವನ್ನು ಜ. 15 ರಂದು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ, ತಾ.ಪಂ.ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ಯಕ್ಷಗಾನ ನಾಟ್ಯ ಗುರು ಪ್ರಶಾಂತ್ ಶೆಟ್ಟಿ ನೆಲ್ಯಾಡಿ ಉಪಸ್ಥಿತರಿದ್ದರು. ಶ್ರೀ ನರಹರಿ ಯಕ್ಷಗಾನ ಕಲಾ ಕೇಂದ್ರದ ಸಂಚಾಲಕ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಜಯಂತ್ ವೈ ಕಾರ್ಯಕ್ರಮ ನಿರೂಪಿಸಿದರು. ಜಯಂತ ಅಬೀರ ವಂದಿಸಿದರು. ಬಳಿಕ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ ನಡೆಯಿತು.


ಸನ್ಮಾನ:

ಶ್ರೀ ನರಹರಿ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತುಗೊಳಿಸಿದ ಯಕ್ಷಗಾನ ನಾಟ್ಯಗುರು ಪ್ರಶಾಂತ್ ಶೆಟ್ಟಿ ನೆಲ್ಯಾಡಿ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here