ಪುತ್ತೂರು: ಅನಾರೋಗ್ಯ ಪೀಡಿತರಾಗಿರುವ ಪಾಣಾಜೆ ಗ್ರಾಮ ಪಂಚಾಯತಿ ಸದಸ್ಯ ನಾರಾಯಣ ನಾಯಕ್ ಅವರಿಗೆ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಆರ್ಥಿಕ ನೆರವು ನೀಡಿದ್ದಾರೆ. ನಾರಾಯಣ ನಾಯಕ್ ಅವರ ಮನೆಗೆ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದ ಅಶೋಕ್ ರೈ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಬು ರೈ ಕೋಟೆ, ಸದಸ್ಯರಾದ ಕೃಷ್ಣಪ್ಪ ಪೂಜಾರಿ, ತಾಲೂಕು ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ದಿನೇಶ್ ಭಟ್ ಕಟಿಲಾಜೆ, ವಿಶ್ವನಾಥ ರೈ ಕಡಮಜೆ ಮೊದಲಾದವರು ಉಪಸ್ಥಿತರಿದ್ದರು.