ಡಾ| ತಾಳ್ತಜೆ ವಸಂತ ಕುಮಾರ್‌ಗೆ ಪ್ರೊ|ಎಸ್.ಬಿ. ಪರಮೇಶ್ವರ ಭಟ್ಟ ಸಂಸ್ಮರಣಾ ಪ್ರಶಸ್ತಿ

0

ಪುತ್ತೂರು: 2022ನೇ ಸಾಲಿನ ಪ್ರತಿಷ್ಠಿತ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ, ವಿಶ್ರಾಂತ ಕನ್ನಡ ಪ್ರಾಧ್ಯಾಪಕರೂ ಆಗಿರುವ ಉಪ್ಪಿನಂಗಡಿಯ ಡಾ| ತಾಳ್ತಜೆ ವಸಂತ ಕುಮಾರ್ ಇವರಿಗೆ ನೀಡಿ ಗೌರವಿಸಲು ಹಿರಿಯ ವಿದ್ವಾಂಸ ಪ್ರೊ| ಬಿ. ಎ. ವಿವೇಕ ರೈಯವರ ಅಧ್ಯಕ್ಷತೆಯ ಆಯ್ಕೆ ಸಮಿತಿ ನಿರ್ಧರಿಸಿದೆ.


ಡಾ| ತಾಳ್ತಜೆ ವಸಂತ ಕುಮಾರ್‌ರವರು ಪುತ್ತೂರು ತಾಲೂಕಿನ ಉಪ್ಪಿನಂಗಡಿಯವರು. ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದವರು. ಸೃಜನಾತ್ಮಕ ಸಾಹಿತಿಗಳು, ವಿಮರ್ಶಕರು ಹಾಗೂ ಸಂಶೋಧಕರೂ ಆದ ಇವರು ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಸಂಶೋಧನಾ ಮಹಾ ಪ್ರಬಂಧವೂ ಒಳಗೊಂಡಂತೆ ಕಾದಂಬರಿ, ವಿಮರ್ಶೆ, ಅಧ್ಯಯನ, ಸಂಶೋಧನೆ, ಪರಿಚಯ ಹಾಗೂ ಸಂಪಾದಿತ ಹಲವು ಮೌಲಿಕ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಇವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೇಡಿಯಾಪು ವಿದ್ವತ್ ಪ್ರಶಸ್ತಿ, ಗೊರೂರು ಸಾಹಿತ್ಯ ಪ್ರಶಸ್ತಿ, ಕಾಂತಾವರ ಪ್ರಶಸ್ತಿ, ಗುರು ನಾರಾಯಣ ಸಾಹಿತ್ಯ ಪ್ರಶಸ್ತಿಯೂ ಒಳಗೊಂಡಂತೆ ಹಲವು ಪ್ರಶಸ್ತಿ ಗೌರವಗಳಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಪ್ರೊ. ಎಸ್. ಬಿ. ಪಿಯವರ ಜನ್ಮ ದಿನವಾದ ಫೆಬ್ರವರಿ 8ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here