ಹಾಡಹಗಲೇ ನಾಯಿ ಮರಿಯನ್ನು ಹೊತ್ತೊಯ್ದ ಚಿರತೆ

0

ಉಪ್ಪಿನಂಗಡಿ: ಮಧ್ಯಾಹ್ನ ಹೊತ್ತೇ ಪ್ರತ್ಯಕ್ಷಗೊಂಡ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಬುಧವಾರ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ.

ಗಣೇಶ್  ಇವರ ಪತ್ನಿ ಪೂರ್ಣಿಮ ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಆಗಿದ್ದು, ಅವರು ಕಚೇರಿಗೆ ಹೋಗಿದ್ದರು. ಪುಟ್ಟ ಮಗ ಶಾಲೆಗೆ ಹೋಗಿದ್ದ. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ಅವರು ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಘಟನೆ ಸಂಭವಿಸಿದೆ.

ಗ್ರಾಮದ ಜನತೆಯಲ್ಲಿ ಆತಂಕ:

ಚಿರತೆ ಬಂದು ನಾಯಿ ಮರಿಯನ್ನು ಹೊತ್ತೊಯ್ದ ಘಟನೆಯ ಬಗ್ಗೆ ಊರಿನಲ್ಲಿ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿರುವ ಚಿರತೆಯ ಬಗ್ಗೆ ಗ್ರಾಮಸ್ಥರಲ್ಲಿ ಆತಂಕದ ಮಾತುಗಳು ವ್ಯಕ್ತವಾಗಿವೆ.

ಬಾರ್‍ಯ, ನೀಲಗಿರಿ ಪರಿಸರದಲ್ಲಿ ಸುಮಾರು 2 ತಿಂಗಳಿನಿಂದ ಚಿರತೆ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಹಲವು ಬಾರಿ ಅರಣ್ಯ ಇಲಾಖೆ ಗಮನಕ್ಕೂ ತರಲಾಗಿದೆ. ಆದರೆ ಇಲಾಖೆ ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅಧಿಕಾರಿಗಳು ಇತ್ತ ಬರಲೇ ಇಲ್ಲ, ಇದೀಗ ಚಿರತೆ ನಾಯಿ ಮರಿಯನ್ನು ಹೊತ್ತೊಯ್ದಿದೆ, ಜನತೆಯಲ್ಲಿ ಮೂಡಿರುವ ಆತಂಕವನ್ನು ದೂರ ಮಾಡುವಲ್ಲಿ ಅರಣ್ಯ ಇಲಾಖೆ ಅಗತ್ಯ ಕ್ರಮ ಜರಗಿಸಬೇಕು ಎಂದು ಬಾರ್‍ಯ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಸುಲೈಮಾನ್ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here