ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಅನಿರ್ಧಿಷ್ಟ ಧರಣಿ ಪುತ್ತೂರು, ಕಡಬದ ಅಂಗನವಾಡಿ ಬಂದ್

0

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಜ.18ರಂದು ಬೆಂಗಳೂರಿನಲ್ಲಿ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ಪ್ರಾರಂಭಗೊಂಡಿದೆ. ಪುತ್ತೂರು ಹಾಗೂ ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.


ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾರಂಭದಲ್ಲಿ ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದ ಮುಂಭಾಗದಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಸುಮಾರು 300ಕ್ಕೂ ಅಧಿಕ ಮಂದಿ ಕಾರ್ಯಕರ್ತೆಯರು, ಸಹಾಯಕಿಯರು ಬೆಂಗಳೂರಿನಲ್ಲಿ ನಡೆಯುವ ಧರಣಿ ಸತ್ಯಾಗ್ರಹದಲ್ಲಿ
ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here