ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪರಿಷ್ಕೃತ ಅಂತಿಮ ವೇಳಾ ಪಟ್ಟಿ ಪ್ರಕಟ – ಮಾ.31-ಏ.15 ಅಂತಿಮ ಪರೀಕ್ಷೆ

0

ಪುತ್ತೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾ ಪಟ್ಟಿಯಲ್ಲಿ ಬದಲಾವಣೆ ಮಾಡಿ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ.


ಮಾ.31ರಿಂದ ಏ.15ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಬೆಳಿಗ್ಗೆ 10.30ರಿಂದ ಅಪರಾಹ್ನ 1.45ರವರೆಗೆ ನಡೆಯಲಿದೆ. ಕೋರ್ ವಿಷಯಗಳಲ್ಲಿ ಸಂಗೀತದ ಪರೀಕ್ಷೆಗಳು ಮಾತ್ರ ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ಹಾಗೂ ಎಸ್‌ಎಸ್‌ಕ್ಯೂಎಫ್ ಪರೀಕ್ಷೆಗಳು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.45ರವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ sslc.karnataka.gov.in ವೀಕ್ಷಿಸಬಹುದು.‌

ವೇಳಾಪಟ್ಟಿ: ಮಾ.31: ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಏ.3: ಗಣಿತ, ಸಮಾಜಶಾಸ, ಏ.6: ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಏ.8: ಕೋರ್ ವಿಷಯ ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇಂಜಿನಿಯರಿಂಗ್ ಗ್ರಾಫಿಕ್ಸ್, ಪ್ರೋಗ್ರಾಮಿಂಗ್-ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ, ಏ.10: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಏ.12: ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ವಿಷಯಗಳು-ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆಂಡ್ ವೆಲ್‌ನೆಸ್, ಏ.15: ಸಮಾಜ ವಿಜ್ಞಾನ

LEAVE A REPLY

Please enter your comment!
Please enter your name here