ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ

0

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ.


ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ. 18ರಂದು ಅನಿರ್ಧಿಷ್ಟ ಧರಣಿ ಆರಂಭಿಸಿದ್ದಾರೆ. ಧರಣಿ ಸತ್ಯಾಗ್ರಹದ ಪ್ರಾರಂಭದಲ್ಲಿ ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದ ಮುಂಭಾಗದಿಂದ ಫ್ರೀಡಂಪಾರ್ಕ್‌ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಸುಮಾರು 300 ಕ್ಕೂ ಅಧಿಕ ಮಂದಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೆಂಗಳೂರಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ. ಸತ್ಯಾಗ್ರಹ ಜ.20ರಂದೂ ಮುಂದುವರಿಯಲಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಕಮಲರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here