





ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು ಇವರ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಜ.14ರಂದು ಬೆಳಿಗ್ಗೆ ನನ್ಯ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿಯೂ ಸ್ವಾಮಿ ವಿವೇಕಾನಂದರ ಸಂದೇಶವನ್ನು ಪಾಲಿಸಬೇಕು ಎಂದು ಹೇಳಿದರು.


ವಿವೇಕಾನಂದರ ಜೀವನ ಯುವ ಪೀಳಿಗೆಗೆ ಸ್ಪೂರ್ತಿ-ಲೋಕೇಶ್ ಚಾಕೋಟೆ:
ಮುಖ್ಯ ಭಾಷಣ ಮಾಡಿದ ಅರಿಯಡ್ಕ ಗ್ರಾ.ಪಂ ಸದಸ್ಯ ಲೋಕೇಶ್ ಚಾಕೋಟೆಯವರು ಮಾತನಾಡಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಶಾಲೆಯಲ್ಲಿ ಆಯೋಜನೆ ಮಾಡಿರುವುದು ತುಂಬಾ ಅರ್ಥಪೂರ್ಣ ವಾಗಿದೆ. ಈ ಕಾರ್ಯಕ್ರಮದ ಮೂಲಕ ವಿವೇಕಾನಂದರ ಆದರ್ಶ ಜೀವನವನ್ನು ಮಕ್ಕಳಿಗೆ ಪರಿಚಯಿಸಲು ಸಾಧ್ಯವಾಗುತ್ತದೆ. ಸ್ವಾಮಿ ವಿವೇಕಾನಂದರ ಜೀವನವು ಯುವ ಪೀಳಿಗೆಗೆ ಸ್ಪೂರ್ತಿಯಾಗಿದೆ ಎಂದು ಹೇಳಿದರು.






ನನ್ಯ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಕುಲಾಲ್ ಆಚಾರಿಮೂಲೆ, ನನ್ಯ ಶಾಲಾ ಮುಖ್ಯಗುರು ಮಮತಾರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಸುನಿಲ್ ನಿಧಿಮುಂಡರವರು ಪ್ರಸ್ತಾವನೆಗೈದರು. ಯುವಕ ಮಂಡಲದ ಅಧ್ಯಕ್ಷ ಜಗದೀಶ ನಾಯ್ಕರವರು ಸಭಾಧ್ಯಕ್ಷತೆ ವಹಿಸಿ ವಂದಿಸಿದರು. ನನ್ಯ ಶಾಲಾ ಮಕ್ಕಳು ಪ್ರಾರ್ಥಿಸಿದರು. ಯುವಕ ಮಂಡಲದ ಉಪಾಧ್ಯಕ್ಷ ಶ್ರೀಕುಮಾರ್ ಬಲ್ಯಾಯ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ನನ್ಯರವರು ಕಾರ್ಯಕ್ರಮ ನಿರ್ವಹಿಸಿದರು.
 ಕಾರ್ಯಕ್ರಮದಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷ ಶೇಷಪ್ಪ ಗೌಡ ಪರನೀರು, ಕೋಶಾಧಿಕಾರಿ ಹರೀಶ್ ಕೆರೆಮೂಲೆ, ಭಜನಾ ಸಂಘದ ಗೌರವಾಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ, ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ, ಸದಸ್ಯ ನಿರಂಜನ ರಾವ್, ಎಸ್.ಡಿ.ಎಂ.ಸಿ ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಕರು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಚಿತ್ರಕಲಾ ಸ್ಪರ್ಧೆ: ಸ್ವಾಮಿ ವಿವೇಕಾನಂದರ ಜನ್ಮದಿನದ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ನನ್ಯ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು.


 
            