ಜ.25:ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವ

0

  • ಜ.24:ಹಸಿರುವಾಣಿ ನೀಡಲಿಚ್ಛಿಸುವವರು ಬುಧವಾರ ಮೊದಲು ಶ್ರೀ ಕ್ಷೇತ್ರಕ್ಕೆ ಒಪ್ಪಿಸತಕ್ಕದ್ದು.
  • ಭಕ್ತಾದಿಗಳಿಂದ ಅನ್ನದಾನಕ್ಕೆ ಬೇಕಾದ ಅಕ್ಕಿ, ಹೂ, ಹಿಂಗಾರ, ಬೀಡ, ಚಕ್ಕುಲಿ, ಶೇಂದಿ, ತೆಂಗಿನಕಾಯಿ, ದವಸಧಾನ್ಯಗಳು,
  • ತರಕಾರಿ, ಬಾಳೆಎಲೆ ಮೊದಲಾದುವುಗಳನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಲಾಗುವುದು.
    ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ(ಅಗೇಲು ಬಾಬ್ತು ರೂ.1200) ನಡೆಯಲಿರುವುದು.
  • ಹರಕೆಯನ್ನು ಒಪ್ಪಿಸುವವರು ಅದೇ ದಿನ ಸಮಿತಿಯವರಲ್ಲಿ ತಿಳಿಸತಕ್ಕದ್ದು.

ಪುತ್ತೂರು: ಸರಿಸುಮಾರು 382 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪುವಿನಲ್ಲಿ ವಾರ್ಷಿಕ ನೇಮೋತ್ಸವವು ಜ.23 ರಿಂದ 25ರ ತನಕ ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ.

ಜ.23 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದೇವರ ಅರ್ಚಕರ ನೇತೃತ್ವದಲ್ಲಿ ಜರಗಲಿದ್ದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಜ.24 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಮಧ್ಯಾಹ್ನ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಕಾಲಾವಧಿ ತಂಬಿಲ ನಡೆಯಲಿದೆ. ಜ.25 ರಂದು ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತಮಾನದವರೆಗೆ ಅರ್ಧ ಏಕಾಹ ಭಜನೆ, ರಾತ್ರಿ ಕೊರಗಜ್ಜ ದೈವದ ಭಂಡಾರ ತೆಗೆಯುವುದು ಹಾಗೂ ಶ್ರೀ ಕೊರಗಜ್ಜ ದೈವಕ್ಕೆ ಎಣ್ಣೆ ಕೊಡುವುದು, ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಬಳಿಕ ಅನ್ನ ಸಂತರ್ಪಣೆ ಜರಗಲಿದೆ.

ಭಾಗವಹಿಸುವ ಭಜನಾ ಮಂಡಳಿಗಳು:

ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಪಾಲಿಂಜೆ ಶ್ರೀ ಮಹಾವಿಷ್ಣು ಮಹಿಳಾ ಭಜನಾ ಮಂಡಳಿ, ಮೊಟ್ಟೆತ್ತಡ್ಕ ಮಿಷನ್‌ಮೂಲೆ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ, ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಸ್ವಾಮಿ ಕೊರಗಜ್ಜ ಭಜನಾ ಮಂಡಳಿ, ಮರಾಠಿ ಯುವ ವೇದಿಕೆ ಭಜನಾ ತಂಡ, ಶ್ರೀ ವಜ್ರಮಾತಾ ಮಹಿಳಾ ಭಜನಾ ಮಂಡಳಿ, ಕರಿಕ್ಕಳ ತೋಟಮಜಲು ಸ್ವಾಮಿ ಕೊರಗಜ್ಜ ಭಕ್ತ ವೃಂದ ಭಜನಾ ಮಂಡಳಿ, ಮೊಗರು ಮಹಾವಿಷ್ಣು ಭಜನಾ ಮಂಡಳಿ, ದೇವಸ್ಯ ಶ್ರೀಹರಿ ಭಜನಾ ಮಂಡಳಿ, ಬಳ್ಪ ಧರ್ಮಶಾಸ್ತಾವು ಕುಣಿತ ಭಜನಾ ತಂಡದ ಸದಸ್ಯರಿಂದ ಭಜನೆ ಕಾರ್ಯಕ್ರಮ ಜರಗಲಿದೆ.

ಶಾಶ್ವತ ದ್ವಾರ ಲೋಕಾರ್ಪಣೆ:

ಪಂಜಳ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಶ್ರೀ ಕ್ಷೇತ್ರದಲ್ಲಿ ಶಾಶ್ವತ ದ್ವಾರವನ್ನು ನಿರ್ಮಾಣ ಮಾಡಲಾಗಿದ್ದು, ಇದರ ಲೋಕಾರ್ಪಣೆಯು ನೇಮೋತ್ಸವದ ದಿನದಂದು ಜರಗಲಿದೆ. ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರು ಶಾಶ್ವತ ದ್ವಾರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಗಣೇಶ್ ಪೂಜಾರಿ(7349237945), ವಿಶ್ವನಾಥ ಮಣ್ಣಾಪು(7760580714), ದಿನೇಶ್ ಕೆಮ್ಮಿಂಜೆ(7676806506) ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ವಿಶ್ವನಾಥ್ ಮಣ್ಣಾಪು, ಕಾರ್ಯದರ್ಶಿ ದಿನೇಶ್ ಕೆಮ್ಮಿಂಜೆ, ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ, ಕೋಶಾಧಿಕಾರಿ ಗುರುವ ಮಣ್ಣಾಪು, ಮಧ್ಯಸ್ತ ಗಣೇಶ್ ಪೂಜಾರಿ ಕೆಮ್ಮಿಂಜೆ, ದೈವದ ಪ್ರಧಾನ ಅರ್ಚಕರಾದ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ರವಿ ಕೆ.ಮಣ್ಣಾಪು, ಗೌರವ ಸಲಹೆಗಾರರಾದ ಗಂಗಾಧರ ಮಣ್ಣಾಪು, ವಿಶ್ವನಾಥ ನಾಯ್ಕ ಅಮ್ಮುಂಜ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರ ಸಿದ್ಧಿಸುವ ಕ್ಷೇತ್ರ…

ಈ ಕ್ಷೇತ್ರದ ಮೂಲ ಕುತ್ತಾರ್‌ಪದವು ಆಗಿದ್ದು, ಸಂಪ್ರದಾಯ ಪ್ರಕಾರ ಕೊರಗಜ್ಜನ ಕಟ್ಟೆಯನ್ನು ಸಿಮೆಂಟ್ ಬಳಸದೆ ಕೆಂಪು ಕಲ್ಲು ಮತ್ತು ಲಾವಾ ಮರದ ತೊಗಟೆ ರಸಮಿಶ್ರಿತ ಮಣ್ಣು ಹಾಗೂ ಬೆಲ್ಲ ಸೇರಿಸಿ ನಿರ್ಮಾಣ ಮಾಡಲಾಗಿದೆ. ಈ ಮಣ್ಣಾಪು ಕ್ಷೇತ್ರದಲ್ಲಿ ಶ್ರೀಮಂತರಿಲ್ಲ ಬದಲಾಗಿ ಹೃದಯವಂತರು ಇದ್ದಾರೆ. ಯುವಕರೇ ಈ ಕ್ಷೇತ್ರದ ಶಕ್ತಿಯಾಗಿದ್ದು ಕೇವಲ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುವ ಇಲ್ಲಿನ ಕುಟುಂಬವಾಗಿದೆ. ಶ್ರೀ ಕ್ಷೇತ್ರಕ್ಕೆ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನಸಾಗರ ಹರಿದು ಬರುತ್ತಿದ್ದು, ಶ್ರೀ ಕ್ಷೇತ್ರವು ನಂಬಿದವರಿಗೆ ವರವ ಸಿದ್ಧಿಸುವ ಕ್ಷೇತ್ರವಾಗಿದೆ. ನೇಮೋತ್ಸವವು ಶಿಸ್ತುಬದ್ಧವಾಗಿ ನಡೆಯಲು ಭಕ್ತರು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದಲ್ಲಿ ನಡೆಯುವ ವಾರ್ಷಿಕ ನೇಮೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಕೊರಗಜ್ಜನ ಕೃಪೆಗೆ ಪಾತ್ರರಾಗಬೇಕು.

-ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಗೌರವಾಧ್ಯಕ್ಷರು, ಶ್ರೀ ಕ್ಷೇತ್ರ ಮಣ್ಣಾಪು

LEAVE A REPLY

Please enter your comment!
Please enter your name here