ಪುತ್ತೂರು:ಪಕ್ಷದ ತತ್ವ ಸಿದ್ಧಾಂತ ಅಳವಡಿಸಿಕೊಂಡು ಪಕ್ಷದ ಗೌರವ ಹೆಚ್ಚಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಗೆ ಬಿಜೆಪಿ ಪಕ್ಷದಲ್ಲಿ ಅವಕಾಶವೇ ಇಲ್ಲ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಹೇಳಿದರು.
ಮುಂಡೂರು ಅಜಲಾಡಿ ಉದಯಗಿರಿಯಲ್ಲಿ ನಡೆದ ಮುಂಡೂರು ಗ್ರಾಮದ ಬೂತ್ ಕಾರ್ಯಕರ್ತರ ಮತ್ತು ಪ್ರಮುಖ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಕ್ಷದ ಜವಾಬ್ದಾರಿ ವಹಿಸಿಕೊಂಡು ಈ ಭಾಗದಲ್ಲಿ ಪಕ್ಷ ಒಡೆಯುವ ಕೆಲಸ ಮಾಡಿರುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸಿ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಪಕ್ಷದಲ್ಲಿ ಪ್ರತಿಯೊಬ್ಬರು ಪಕ್ಷದ ತತ್ವ ಸಿದ್ಧಾಂತ ಅಳವಡಿಸಿಕೊಂಡು ಪಕ್ಷದ ಗೌರವ ಹೆಚ್ಚಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಮುಂಡೂರು ಗ್ರಾಮ ಬಿಜೆಪಿ ಭದ್ರ ಕೋಟೆಯಾಗಿದ್ದು ಮುಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಿಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರಲ್ಲದೆ ಮುಂದಿನ ಪುತ್ತೂರಿನಲ್ಲಿ ಬಿಜೆಪಿ ಯನ್ನು ಬಾರಿ ಅಂತರದಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಪಕ್ಷದ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಮಾತಾಡಿ ಮುಂದಿನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಪಕ್ಷವನ್ನು ಬೂತ್ ಮಟ್ಟದಲ್ಲಿ ಇನ್ನಷ್ಟು ಬಲಪಡಿಸಬೇಕೆಂದು ತಿಳಿಸಿದರು.
ಮುಂಡೂರು ಗ್ರಾ.ಪಂ ಅಧ್ಯಕ್ಷ ಪುಷ್ಪಾ ಪುರಂದರ ಗೌಡ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ಜಯರಾಮ ಪೂಜಾರಿ ನರಿಮೊಗರು, ಪಕ್ಷದ ಪ್ರಮುಖರಾದ ಶ್ರೀಕಾಂತ್ ಆಚಾರ್, ಅನಿಲ್ ಕಣ್ಣಾರ್ನೂಜಿ, ಸೇಸಪ್ಪ ಶೆಟ್ಟಿ, ಅರುಣ ಕುಮಾರ್ ಪುತ್ತಿಲ, ಪ್ರವೀಣ್ ಸೇರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರು, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಮುಂಡೂರು ಗ್ರಾ.ಪಂ ಸದಸ್ಯ ಅಶೋಕ್ ಪುತ್ತಿಲ ಸ್ವಾಗತಿಸಿ, ಉಮೇಶ್ ಗುತ್ತಿನಪಾಲು ವಂದಿಸಿದರು.