Saturday, February 4, 2023
Homeಚಿತ್ರ ವರದಿಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯ ಭೂಮಿಪೂಜೆ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯ ಭೂಮಿಪೂಜೆ

ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಬಾಲಾಲಯದ ಭೂಮಿ ಪೂಜೆಯು ಜ.23ರಂದು ನಡೆಯಿತು. ದೇವಸ್ಥಾನದ ಅರ್ಚಕರು, ಅನುವಂಶೀಯ ಮೊಕ್ತೇಸರರಾದ ಜನೇಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಫೆ.1-3- ಕ್ಷೇತ್ರದಲ್ಲಿ ಅನುಜ್ಜಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ

ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಾಲಯದ ಅನುಜ್ಜಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯು ಫೆ 1ರಿಂದ ಫೆ 3ರವರೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here

Must Read

spot_img
error: Content is protected !!