ಉಪ್ಪಿನಂಗಡಿ: ಇಲ್ಲಿನ ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ ಹಾಗೂ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ಆಶ್ರಯದಲ್ಲಿ 46ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜ.25ರಂದು ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.
ಸಂಜೆ 5ರಿಂದ ಮುಕುಂದ ಭಟ್ ಪೆರ್ಲ ಇವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದ್ದು, ರಾತ್ರಿ 7:30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ಅಧ್ಯಕ್ಷ ಸುರೇಶ್ ಗೌಂಡತ್ತಿಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಭಜನಾ ಮಂದಿರದ ಗೌರವ ಸಲಹೆಗಾರ ಶಂಕರನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಯಕ್ಷಧ್ರುವ ಪಟ್ಲ ಫೌಂಡೇಶನ್ನ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಜಗದೀಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಅನ್ನಸಂತರ್ಪಣೆ ನಡೆದು, 9ರಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ’ ತುಳು ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.