ಬೊಳುವಾರು ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಚಂಡಿಕಾಯಾಗ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ 7ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ, ಚಂಡಿಕಾಯಾಗ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜ.24ರಂದು ನಡೆಯಿತು.


ಜ.24ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಪಂಚವಿಂಶತಿ ಕಲಶಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ತಂಬಿಲ ಸೇವೆ, ಮಲರಾಯ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವೆ. ಮಧ್ಯಾಹ್ನ ಚಂಡಿಕಾ ಯಾಗದ ಪೂರ್ಣಾಹುತಿ, ಸುವಾಸಿನಿ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

LEAVE A REPLY

Please enter your comment!
Please enter your name here