ವಿಟ್ಲ: ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಪ್ರಥಮ ಮತ್ತು ದ್ವಿತಿಯ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಶಂಕರಿ ಬಲಿಪಗುಳಿರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ನ ಸಭಾಭವನದಲ್ಲಿ ನಡೆಯಿತು.
ಬಳಿಕ ಮಾತನಾಡಿದ ಅವರು ಗ್ರಾಮ ಪಂಚಾಯತ್ 2022-23 ನೇ ಸಾಲಿಗೆ ಸಂಬಂಧಿಸಿದಂತೆ ಕ್ರಿಯಾಯೋಜನೆಯನುಸಾರ ಕಾಮಗಾರಿಗಳು ಅನುಸ್ಟಾನಗೊಳ್ಳುತಿದ್ದು ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಸ್ವೀಕರಿಸಲಾದ ಬೇಡಿಕೆಗಳನ್ನು ಆದ್ಯತೆಯನುಸಾರ ಈಡೇರಿಸಲಾಗುವುದು ಎಂದು ಅವರು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕರಾದ ಕೆ. ಆರ್. ವೀಣಾ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದರು. ಗ್ರಾಮ ಸಭೆಯಲ್ಲಿ ವಿಶೇಷವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿರುವ ಮಜಿ ರಾಮಭಟ್, ರಾಜಾರಾಮ್ ಕಾರಂತ ಪಳ್ಳಿಗದ್ದೆ, ನಾಟಿವೈದ್ಯರಾದ ಚೋಮ ನಾಯ್ಕ ಕುಕ್ಕಿಲರವರನ್ನು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೆಗಾ ಯೋಜನೆಯಡಿ 100 ದಿನ ಪೂರೈಸಿದ ಕುಟುಂಬದ ಒಬ್ಬ ಸದಸ್ಯರಿಗೆ ಟೀ- ಶರ್ಟ್ ಮತ್ತು ಕ್ಯಾಪ್ ವಿತರಿಸಲಾಯಿತು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಉಪಾದ್ಯಕ್ಷ ನಾಗೇಶ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ, ಜಯಲಕ್ಷೀ, ಪ್ರೇಮಲತಾ, ಕೆ. ರೇಖಾ, ಜಯಭಾರತಿ, ಹರ್ಷದ್ ಕೆ.ಎಮ್, ಅವ್ವಮ್ಮ, ನೇಬಿಸಾ ಕೆ ಎಚ್, ಅಮಿತ, ಸಂದೇಶ ಶೆಟ್ಟಿ, ಮೈಮುದ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಶೈಲ್ ಸ್ವಾಗತಿಸಿ, ಕಾರ್ಯಕ್ರವನ್ನು ನಿರೂಪಿಸಿದರು. ಕಾರ್ಯದರ್ಶಿ ಸುಜಯ ಕೆ. ರವರು ವರದಿ ಮಂಡಿಸಿ ವಂದಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.