ವಿಟ್ಲ ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ: ಮತ್ತೋರ್ವನ ಬಂಧನ

0

ವಿಟ್ಲ: ಇಲ್ಲಿನ ಜಾತ್ರೋತ್ಸವದ ಸಂದರ್ಭದಲ್ಲಿ ಸ್ಟಾಲ್ ಹಾಕಿದ್ದ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ ಓರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ಶ್ರೀಧರ್ ರವರ ಪುತ್ರ ಹರ್ಷಿತ್ ಬಂಧಿತ ಆರೋಪಿ.

ಘಟನೆಗೆ ಸಂಬಂಧಿಸಿದಂತೆ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ವರು ಯುವಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪ್ರಮುಖ ಆರೋಪಿ ಗಣೇಶ್ ಕಡಂಬುರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇನ್ನೋರ್ವ ಆರೋಪಿ ಮಂಜುನಾಥ್ ಕೇರಳ ಭಾಗದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹರ್ಷಿತ್‌ನ ಬಂಧನವಾಗುವುದರೊಂದಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾದಂತಾಗಿದೆ.

ಆರೋಪಿಯು ಈ ಹಿಂದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಈತನ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

LEAVE A REPLY

Please enter your comment!
Please enter your name here