ಸಾಮಾಜಿಕ ಜಾಲತಾಣದಲ್ಲಿ ಭಜಕರ ನಿಂದನೆ ಆರೋಪ- ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು ಆದೇಶಕ್ಕೆ ತಡೆ

0

ಪುತ್ತೂರು: ಭಜಕರ ನಿಂದನೆ ಹಾಗೂ ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಡಾಫೆಯಾಗಿ ವರ್ತಿಸಿದ ದೂರಿನ ಹಿನ್ನೆಲೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಅಮಾನತುಗೊಳಿಸಿ ನೀಡಲಾಗಿದ್ದ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಾಧಿಕರಣ (ಕೆಎಟಿ) ತಡೆ ನೀಡಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಭಜಕರ ನಿಂದನೆ ಹಾಗೂ ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಉಡಾಫೆ ಉತ್ತರ ನೀಡಿದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ವಲಯ ಅರಣ್ಯ ಇಲಾಖೆಯ ಕೊಯಿಲ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಅಮಾನತುಗೊಳಿಸಿ ಮಂಗಳೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಸಂಜೀವ ಪೂಜಾರಿಯವರು ಕೆಎಟಿ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಕೆಎಟಿ ಅಮಾನತು ಆದೇಶಕ್ಕೆ ತಡೆ ನೀಡಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here