ಬಡಗನ್ನೂರುಃ ಗೆಜ್ಜೆಗಿರಿ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜ.24ರಂದು ನಡೆಯಿತು. ಸಭೆಯು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ರಾಜಶೇಖರ್ ಕೋಟ್ಯಾನ್, ಗೆಜ್ಜೆಗಿರಿ ನಂದನಬಿತ್ತಿಲ್ ನ ಶ್ರೀಧರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಉಚ್ಚಿಲ್, ಪ್ರಮುಖರಾದ ಶೈಲೇಂದ್ರ ಸುವರ್ಣ, ನವೀನ್ ಸುವರ್ಣ ಸಜಿಪ, ಪ್ರಶಾಂತ್ ಪೂಜಾರಿ ಮಸ್ಕತ್, ಡಾ.ರಾಜಾರಾಂ, ಶೇಖರ್ ಬಂಗೇರ ಹೆರಾಜೆ, ರಾಜೇಂದ್ರ ಚಿಲಿಂಬಿ, ನಾರಾಯಣ ಮಚ್ಚಿನ, ಜಯರಾಂ ಬಂಗೇರ ಹೆರಾಜೆ ಮುಂತಾದವರು ಉಪಸ್ಥಿತರಿದ್ದರು.
ಫೆಬ್ರವರಿ 28ರಂದು ಪ್ರತಿಷ್ಠಾ ವರ್ಧಂತಿ, ಮಾರ್ಚ್ 16, 17, 18ರಂದು ಜಾತ್ರಾಮಹೋತ್ಸವ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.