ಕಾರ್ಯಕ್ರಮ ಮಾಡುವುದು ಮಾತ್ರವಲ್ಲ ಸ್ವಚ್ಚತೆಯಲ್ಲೂ ಸೈ ಎನಿಸಿಕೊಂಡ ಪುತ್ತೂರು ಡಾ.ಬಾಲಗಂಗಾಧರನಾಥ ಶ್ರೀಗಳ ಜಯಂತ್ಯೋತ್ಸವ ಸಂಸ್ಮರಣಾ ಸಮಿತಿ

0

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜ.22 ರಂದು ನಡೆದ ಭೈರವೈಕ್ಯ ಡಾ.ಶ್ರೀ ಬಾಲಗಂಗಾದರನಾಥ ಶ್ರೀಗಳ 78 ನೇ ವರ್ಧಂತ್ಯೋತ್ಸವ ಕಾರ್ಯಕ್ರಮದ ಬಳಿಕ ಜ.25 ರಂದು ಕಾರ್ಯಕ್ರಮ ನಡೆದ ಸ್ಥಳದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಯಂತ್ಯೋತ್ಸವ ಸಮಿತಿ ಕಾರ್ಯಾಲಯದಿಂದ ಸ್ವಚ್ಚತೆಗೆ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಯಂತ್ಯೋತ್ಸವ ಸಮಿತಿ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಮಹಿಳಾ ಗೌಡ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ ಗೌಡ, ಗೌರಿ ಬನ್ನೂರು, ಜಯಂತ್ಯೋತ್ಸವ ಸಮಿತಿಯ ಪ್ರಮುಖರಾದ ದಯಾನಂದ ಕೆ, ಪುರುಷೋತ್ತಮ ಮುಂಗ್ಲಿಮನೆ ,ಶ್ರೀಧರ ಗೌಡ ಕಣಜಾಲು, ಶ್ರೀಧರ್ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here