ಕಡಬ: ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

0

ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಈತನ ವಿರುದ್ದ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ, ಸುಳ್ಯ, ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಜ. 25 ರಂದು ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್, ಕಡಬ ಠಾಣಾ ಎಸ್.ಐ ಆಂಜನೇಯ ರೆಡ್ಡಿರವರ ಮಾರ್ಗದರ್ಶನದಲ್ಲಿ ಕಡಬ ಠಾಣಾ ಎ ಎಸ್ ಐ ಸುರೇಶ್ ಮತ್ತು ಇಲಾಖೆ ಜೀಪು ಚಾಲಕ ನಾರಾಯಣ ಪಾಟಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here