ಸವಣೂರು : ನಮ್ಮೂರ ಕೆರೆ ನಮ್ಮಕೆರೆ ಸಮಾಲೋಚನಾ ಸಭೆ

0

ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಕಡಬ ತಾಲೂಕು ಮತ್ತು ಗ್ರಾಮ ಪಂಚಾಯತ್ ಸವಣೂರು ಇದರ ಆಶ್ರಯದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುವ ಸಮ್ಮೂರ ಕೆರೆ ನಮ್ಮ‌ಕೆರೆ ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾಗುವ ಸವಣೂರಿನ ಕೊಂಬಕೆರೆ ಕಾಮಗಾರಿಯ ಕುರಿತು ಸಮಾಲೋಚನಾ ಸಭೆಯು ಜ.27ರಂದು ಸವಣೂರಿನ ಯುವ ಸಭಾಭವನದಲ್ಲಿ ನಡೆಯಿತು.

ಸಭೆಯನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಪ್ರಸ್ತಾವನೆಗೈದರು. ಯೋಜನೆಯ ಕೆರೆ ಅಭಿವೃದ್ಧಿ ವಿಭಾಗದ ಎಂಜಿನಿಯರ್ ಭರತ್ ಅವರು ರೂಪುರೇಷೆಯ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಸವಣೂರು ವಲಯಾಧ್ಯಕ್ಷ ರಾಮಚಂದ್ರ, ಸವಣೂರು ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಗೌಡ, ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು, ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಉಪಸ್ಥಿತರಿದ್ದರು.

ಸಭೆಯಲ್ಲಿ ಕೆರೆ ಅಭಿವೃದ್ಧಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಗಿರಿಶಂಕರ ಸುಲಾಯ, ಕಾರ್ಯದರ್ಶಿಯಾಗಿ ಮೇದಪ್ಪ ಎನ್., ಉಪಾಧ್ಯಕ್ಷರಾಗಿ ನಾರಾಯಣ ಗೌಡ ಪೂವ, ಕೋಶಾಧಿಕಾರಿಯಾಗಿ ಮಹೇಶ್ ಕೆ.ಸವಣೂರು, ಸದಸ್ಯರಾಗಿ ಬಾಬು ಎನ್, ಕೊರಗಪ್ಪ ಗೌಡ, ಮೋನಪ್ಪ ನಾಯ್ಕ, ಮನ್ಮಥ , ಗುಲಾಬಿ, ರಾಜೀವಿ ಶೆಟ್ಟಿ,  ಶೀನಪ್ಪ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.

ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಸ್ವಾಗತಿಸಿದರು, ಯೋಜನೆಯ ಕೃಷಿ ಅಧಿಕಾರಿ ಹರೀಶ್ ಕಾರ್ಯಕ್ರಮ ನಿರೂಪಿಸಿದರು. ವಲಯ ಮೇಲ್ವಿಚಾರಕಿ ಹರ್ಷಕುಮಾರಿ ವಂದಿಸಿದರು.

LEAVE A REPLY

Please enter your comment!
Please enter your name here