ಪುಣಚ ಬಳಂತಿಮೊಗರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ನಿರ್ಮಾಣಕ್ಕೆ ಶಿಲಾನ್ಯಾಸ – ವಿಜ್ಞಾಪನಾ ಪತ್ರ ಬಿಡುಗಡೆ

0

ವಿಟ್ಲ: ಪುಣಚ ಬಳಂತಿಮೊಗರು ಶ್ರೀ ಬ್ರಹ್ಮ ಬೈದರ್ಕಳ ಆಡಳಿತ ಸಮಿತಿ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನವ ನಿರ್ಮಾಣ ಸಮಿತಿ ಆಶ್ರಯದಲ್ಲಿ ಬಳಂತಿಮೊಗರಿನಲ್ಲಿ ನೂತನ ಗರಡಿ ನಿರ್ಮಾಣದ ಅಂಗವಾಗಿ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಜ.27ರಂದು ನಡೆಯಿತು.


ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಶಿಲಾನ್ಯಾಸ ನೆರವೇರಿಸಿದರು. ಮೂಡಂಬೈಲು ವೈಭವಿ ಕಲಾಭವನದಲ್ಲಿ ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬ್ರಹ್ಮ ಬೈದರ್ಕಳ ಆಡಳಿತ ಸಮಿತಿ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನವ ನಿರ್ಮಾಣ ಸಮಿತಿ ಅಧ್ಯಕ್ಷ ಶ್ರೀಧರ ಬಾಳೆಕಲ್ಲು ವಹಿಸಿದ್ದರು.

ಸಮಾರಂಭದಲ್ಲಿ ಬಾಳೆಕಲ್ಲು ಗರಡಿ ಕ್ಷೇತ್ರದ ಮೊಕ್ತೇಸರ ಕೊರಗಪ್ಪ ಪೂಜಾರಿ, ನಾರಾಯಣ ಪೂಜಾರಿ ಬಾಳೆಕಲ್ಲು, ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಉದಯಕುಮಾರ್ ದಂಬೆ, ಕಣಿಹಿತ್ತಿಲು ತರವಾಡು ಆಡಳಿತ ಸಮಿತಿ ಕೋಶಾಧಿಕಾರಿ ಕೃಷ್ಣ ಕುಮಾರ್ ಅಲೆಕ್ಕಾಡಿ, ಆಡಳಿತ ಮೊಕ್ತೇಸರ ಕಾಂತಪ್ಪ ಬಂಗೇರ ಮೊದಲಾದವರು ಉಪಸ್ಥಿತರಿದ್ದರು. ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸೌಮ್ಯಾ ಪ್ರಾರ್ಥಿಸಿದರು. ರವಿಚಂದ್ರ ಸ್ವಾಗತಿಸಿದರು. ಹರೀಶ್ಚಂದ್ರ ಬೊಳಂತಿಮೊಗರು ವಂದಿಸಿದರು. ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here