ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಮತ್ತು ಕೆಎ ಮಸೂದ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನವನ್ನು ನೀಡುವುದಾಗಿ ಎನ್‌ಐಎ ಅಧಿಕಾರಿಗಳು ಘೋಷಿಸಿದ್ದರು. ಇದೀಗ ಇಬ್ಬರು ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದು ಇಬ್ಬರನ್ನು ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಎನ್‌ಐಎ ಕಾರ್ಯಾಚರಣೆ ನಡೆದಿದೆ.