ಪುತ್ತೂರಿನ ಐತಿಹಾಸಿಕ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

0

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಉದ್ಘಾಟನೆ

ಪುತ್ತೂರು: ಇತಿಹಾಸ ಪ್ರಸಿದ್ದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯುವ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳಕ್ಕೆ ಜ.28ರಂದು ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಕಂಬಳ ಕರೆಗೆ ಶ್ರೀದೇವರ ಗಂಧ ಪ್ರಸಾದ, ತೀರ್ಥವನ್ನು ಪ್ರೋಕ್ಷಣೆ ಮಾಡಿ ಉದ್ಘಾಟಿಸಿದರು.

ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸೀತಾರಾಮ ರೈ, ಸಂತಫಿಲೊಮಿನಾ ಕಾಲೇಜಿನ ಪ್ರಾಂಶುಪಾಲ ರೇ.ಫಾ ಆ್ಯಂಟಿನಿ ಪ್ರಕಾಶ್, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುದಾನ ವಿದ್ಯಾಸಂಸ್ಥೆಯ ಸಂಚಾಲಕ ರೇ ವಿಜಯ ಹಾರ್ವೀನ್, ಎಪಿಎಂಸಿ ಮಾಜಿ‌ ಅಧ್ಯಕ್ಷ ದಿನೇಶ್ ಮೆದು, ಸಂಜೀವ ಪೂಜಾರಿ ಕೂರೇಲು, ಗೆಜ್ಜೆಗಿರಿ ಕ್ಷೇತ್ರದ ಪ್ರ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೇಂದ್ರ ಜುಮ್ಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಹಾಜಿ ಅಬ್ದುಲ್ ರಜಾಕ್ ಹಾಜಿ, ಚೆನ್ನಪ್ಪ ರೈ ದೇರ್ಲ, ನಿರ್ಮಲ್ ಕುಮಾರ್ ಜೈನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಎನ್ ಸುಧಾಕರ್ ಶೆಟ್ಟಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಶಾಂತ್ ಕುಮಾರ್ ಕೈಕಾರ, ಬೈಲು ಮಾರಪ್ಪ ಶೆಟ್ಟಿ, ಪ್ರೀತಂ ಪೂಂಜಾ, ಕರುಣಾಕರ ಸುವರ್ಣ, ನಾರಾಯಣ ರೈ ಕುಕ್ಕುವಳ್ಳಿ, ಬನ್ನೂರು ದೇವಳದ ಧರ್ಣಪ್ಪ ಮೂಲ್ಯ, ಭಾಸ್ಕರ್ ಗೌಡ ಕೋಡಿಂಬಾಳ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ವಸಂತ ಕುಮಾರ್ ರೈ ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ. ವಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here