ತಾ.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸವಿತಾ ಮಹರ್ಷಿ ಜಯಂತಿ

0

ಪುತ್ತೂರು;ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಜ.೨೮ರಂದು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಸಂಸ್ಮರಣ ಜ್ಯೋತಿ ಪ್ರಜ್ವಲನೆ ಮಾಡಿದ ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಮಾತನಾಡಿ, ಯಾವುದೇ ಜಾತಿ, ಮತ, ಭೇದವಿಲ್ಲದೆ ಸವಿತಾ ಸಮಾಜದವರು ಸೇವೆ ಮಾಡುತ್ತಿದ್ದಾರೆ. ಸಮಾಜದ ಶ್ರಿ ಸವಿತಾ ಮಹರ್ಷಿಗಳ ಆದರ್ಶ ಇಂದಿಗೂ ಪ್ರಸ್ತುತವಾಗಿದೆ. ತಮ್ಮ ಕುಲ ಕಸುಬುಗಳನ್ನು ಬಿಟ್ಟು ಕೊರೋನಾ ಸಂದರ್ಭದಲ್ಲಿ ಉತ್ತಮ ಸಹಕಾರ ನೀಡಿದ್ದಾರೆ. ಸಮಾಜದವರು ಉತ್ತಮ ಸೇವೆ ಮೂಲಕ ಸಮಾಜಕ್ಕೆ ಕೊಡುಗೆಗಳನ್ನು ನೀಡುವಂತಾಗಲಿ ಎಂದರು.

ತಾಲೂಕು ಸವಿತಾ ಸಮಾಜದ ಮಾಜಿ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಸವಿತಾ ಮಹರ್ಷಿ ಜಯಂತಿ ಆಚರಣೆಯನ್ನು ಮುಂದಿನ ವರ್ಷದ ಅಚರಣೆಯನ್ನು ಸವಿತಾ ಸಮಾಜದ ವತಿಯಿಂದ ಏರ್ಪಡಿಸುವ ಕುರಿತು ಸಹಾಯಕ ಆಯುಕ್ತರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ತಾಲೂಕು ಕಚೇರಿ ವಿಷಯ ನಿರ್ವಾಹಕ ದಯಾನಂದ ಸ್ವಾಗತಿಸಿದರು. ಉಪತಹಶೀಲ್ದಾರ್‌ಗಳಾದ ಸುಲೋಚನ ಪಿ.ಕೆ., ಚೆನ್ನಪ್ಪ ಗೌಡ ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ಸಿಬ್ಬಂದಿ ವೀಣಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here