ಕಡಬ ತಾ| ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

0

ರಾಮಕುಂಜ: ಬಿಳಿನೆಲೆಯಲ್ಲಿ ನಡೆದ ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಜ.24ರಂದು ಪೆರಾಬೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ಕಡಬ ತಾಲೂಕು ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಕಥೆ ಮತ್ತು ಕವನ ರಚನಾ ಕಮ್ಮಟದಲ್ಲಿ ಬಿಡುಗಡೆಗೊಳಿಸಲಾಯಿತು.


ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿದ್ದರು. ಆಲಂಕಾರು ಗ್ರಾ.ಪಂ.ಅಧ್ಯಕ್ಷ ಸದಾನಂದ ಆಚಾರ್ಯ, ಪೆರಾಬೆ ಗ್ರಾ.ಪಂ.ಅಧ್ಯಕ್ಷ ಮೋಹನ್‌ದಾಸ್ ರೈ ಪರಾರಿ, ಸಿಆರ್‌ಪಿಗಳಾದ ಮಹೇಶ್, ಪ್ರಕಾಶ್ ಬಾಕಿಲ, ರಾಮಕುಂಜ ಶಾಲಾ ಸಹಶಿಕ್ಷಕ ಮಲ್ಲೇಶಯ್ಯ, ಪೆರಾಬೆ ಶಾಲಾ ಮುಖ್ಯ ಶಿಕ್ಷಕಿ ಸುಚೇತಾ, ಕುಂಡಾಜೆ ಶಾಲಾ ಶಿಕ್ಷಕ ಪಿ.ಎಸ್.ನಾರಾಯಣ ಭಟ್ ಮತ್ತಿತರರ ಪ್ರಮುಖರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here