ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ (ಆಡಳಿತ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇವರ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ದಕ್ಷಿಣ ವಲಯ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟದಲ್ಲಿ 14 ರ ವಯೋಮಾನದ ಬಾಲಕರ ಉದ್ದ ಜಿಗಿತ ಹಾಗೂ 50 ಮೀಟರ್ ಓಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ಜಿತೇಶ್ ಎಸ್.ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಈತ ಗೋಳಿತ್ತೊಟ್ಟು ಸಮರಗುಂಡಿ ನಿವಾಸಿ ನಾಗೇಶ್ ಶೆಟ್ಟಿ ಹಾಗೂ ರತಿ ಶೆಟ್ಟಿ ದಂಪತಿ ಪುತ್ರ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತಾಧಿಕಾರಿ ಆನಂದ ಎಸ್.ಟಿ, ಮುಖ್ಯಗುರು ಗಾಯತ್ರಿ ಯು.ಎನ್., ವ್ಯವಸ್ಥಾಪಕ ರಮೇಶ್ ರೈ ಆರ್.ಬಿ ಹಾಗೂ ಸಹಶಿಕ್ಷಕರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ ಬಿ., ರಾಘವ ಇವರು ತರಬೇತಿ ನೀಡಿದ್ದಾರೆ.