ಕನ್ಯಾನ: ವ್ಯಕ್ತಿಯ ಮೃತದೇಹ ಪತ್ತೆ

0

ವಿಟ್ಲ: ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕನ್ಯಾನ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ನಿವಾಸಿ ವಿನಯನ್ (58 ವ.) ಎಂದು ಗುರುತಿಸಲಾಗಿದೆ.

ವಿನಯನ್‌ರವರ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಮೃತರ ಮನೆಯವರಿಗೆ ಮಾಹಿತಿ ರವಾನಿಸಲಾಗಿದೆ. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here