






ಪುತ್ತೂರು: ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಜ.29ರಂದು ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.


ಕ್ಷೇತ್ರದಲ್ಲಿ ಪ್ರತಿ ಆದಿತ್ಯವಾರ ಮಧ್ಯಾಹ್ನ ಸ್ವಾಮಿ ಕೊರಗಜ್ಜ ದೈವದ ಕೋಲ,ಅಗೇಲು ಸೇವೆ ನಡೆಯುತ್ತದೆ.ಪ್ರತಿ ತಿಂಗಳ ಸಂಕ್ರಮಣ ದಿನದಂದು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಕ್ಕೆ ಕೋಲ,ಅಗೇಲು ಸೇವೆ ನಡೆಯುತ್ತದೆ.ಪ್ರತಿ ಕೋಲದ ಸಂದರ್ಭದಲ್ಲಿಯೂ ಆಗಮಿಸುವ ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಣೆ ನಡೆಯುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.












