ಶಾಂತಿಮೊಗುರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಷ್ಠ ಬ್ರಹ್ಮಕಲಶೋತ್ಸವ ವೈಭವದ ಹೊರೆಕಾಣಿಕೆ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ

0

ಊರವರ ನಿರಂತರ ಶ್ರಮದಿಂದ ದೇವಸ್ಥಾನ ಅಭಿವೃದ್ಧಿಗೊಂಡಿದೆ – ಸತೀಶ್ ಕುಮಾರ್ ಕೆಡೆಂಜಿ

ಕಾಣಿಯೂರು: ಶಾಂತಿಮೊಗರು ಶ್ರಿ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಊರ ಪರವೂರ ಭಕ್ತರ ಸಹಕಾರದಿಂದ ಸಂಭ್ರದಿಂದ ನಡೆಯಲಿದ್ದು, ಯಶ್ವಸ್ವಿ ಬ್ರಹ್ಮಕಲಶೋತ್ಸವವಾಗಿ ಮೂಡಿಬರಬೇಕು. ಊರವರ ನಿರಂತರ ಶ್ರಮದಿಂದ ದೇವಸ್ಥಾನ ಅಭಿವೃದ್ಧಿಗೊಂಡಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಹೇಳಿದರು. ಅವರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ 5ರಂದು ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಲವಾರು ಅಭಿವೃದ್ಧಿ ಕೆಲಸಕಾರ್ಯಗಳನ್ನು ಹಾಕಿಕೊಂಡಿದೆ. ಊರ, ಪರವೂರ ಭಕ್ತರ ಸಹಕಾರದಿಂದ ಅಭಿವೃದ್ಧಿಗೊಂಡಿದೆ ಹೊರತು ಯಾವುದೇ ಸರಕಾರದಿಂದ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಬಂದಿಲ್ಲ ಎಂದರು. ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜತ್ತಪ್ಪ ರೈ ಬರೆಪ್ಪಾಡಿ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಪ್ರವೀಣ್‌ಕುಮಾರ್ ಕೆಡೆಂಜಿಗುತ್ತು, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಶೂರಪ್ಪ ಗೌಡ ಪಟ್ಟೆತ್ತಾನ ಉಪಸ್ಥಿತರಿದ್ದರು. ಚೆನ್ನಪ್ಪ ಗೌಡ ನೂಜಿ, ಚಂದ್ರಶೇಖರ ಬರೆಪ್ಪಾಡಿ, ವಿಠಲ ಗೌಡ ಕಾಪೆಜಾಲು, ಭರತ್ ನಡುಮನೆ, ಗೀತಾ ಕುವೆತ್ತೋಡಿ, ಪುಷ್ಪಲತಾ ಕುದ್ಮಾರು, ತಾರಾ ಅನ್ಯಾಡಿ ಅತಿಥಿಗಳನ್ನು ಗೌರವಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಭಟ್ ಕೊಯಕ್ಕುಡೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ನಾಗೇಶ್ ಕೆ ಕೆಡೆಂಜಿ ವಂದಿಸಿದರು. ಶಿಕ್ಷಕ ಗಣೇಶ್ ನಡುವಾಲ್ ಕಾರ್ಯಕ್ರಮ ನಿರೂಪಿಸಿದರು.

 

ಕುಮಾರಧಾರ ನದಿತಟದಲ್ಲಿರುವ ದೇವಸ್ಥಾನ ಎಲ್ಲರನ್ನೂ ಆಕರ್ಷಿಸುತ್ತಿದೆ- ಸುಬ್ರಹ್ಮಣ್ಯ ಶ್ರೀ

ವೈಭವದ ಹೊರೆಕಾಣಿಕೆ ಸಮರ್ಪಣೆಗೆ ಚಾಲನೆ: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಭಕ್ತಾದಿಗಳಿಂದ ವೈಭವದ ಹೊರೆಕಾಣಿಕೆ ಸಮರ್ಪಣೆಯಾಗುವ ಮೂಲಕ ಮಂಗಳವಾರ ಸಂಜೆ ಚಾಲನೆ ದೊರೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ ಅವರು ಹಸಿರುಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

ರೆಪ್ಪಾಡಿ ಶಾಂತಿಮೊಗರು ದ್ವಾರದಿಂದ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ಸಾಗಿ ಬಂದ ಭಕ್ತಾದಿಗಳು ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಉಗ್ರಾಣ ಮಹೂರ್ತ ನೆರವೇರಿಸಿ ಆಶೀರ್ವಚನ ನೀಡಿ ಭಕ್ತರ ಅಭೀಷ್ಟವನ್ನು ನೆರವೇರಿಸುವ ಶಾಂತಿಮೊಗುರು ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಕುಮಾರಧಾರ ನದಿತಟದಲ್ಲಿ ಪ್ರಕೃತಿ ರಮಣೀಯ ಪ್ರದೇಶದಲ್ಲಿ ನೆಲೆಯಾಗಿ ಎಲ್ಲರನ್ನೂ ಆಕರ್ಷಿಸುತ್ತಿದೆ. ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ನೆರವೇರುವ ಈ ಸಂದರ್ಭದಲ್ಲಿ ಭಕ್ತರು ಭಕ್ತಿಯಿಂದ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕೆ.ಸಿತಾರಾಮ ರೈ ಸವಣೂರು, ಆಡಳಿತ ಸಮಿತಿಯ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಅನುವಂಶೀಯ ಮೊಕ್ತೇಸರರಾದ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ಚಂದ್ರಶೇಖರ ಬರೆಪ್ಪಾಡಿ, ನಾಗೇಶ್ ಕೆಡೆಂಜಿ, ಕಾರ್ಯದರ್ಶಿ ವೆಂಕಟೇಶ್ ಭಟ್ ಕೊಯಕ್ಕುಡೆ, ಆಡಳಿತ ಸಮಿತಿ ಖಾಯಂ ಆಹ್ವಾನಿತರಾದ ತಾರಾನಾಥ ರೈ ನಗ್ರಿ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಯಶೋಧರ ಕೆ ಕೆಡೆಂಜಿಕಟ್ಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಜೆ ಕ್ಷೇತ್ರ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ರಾತ್ರಿ ಧಾರ್ಮಿಕ ಸಭೆ ನಡೆದು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಮ್ಮ ಕಲಾವಿದರು ಕುಡ್ಲ ಅಭಿನಯದ ಗಿರಿಗಿಟ್ ಗಿರಿಧರೆ ತುಳು ನಾಟಕ ನಡೆಯಿತು.

ಇಂದು ದೇವಸ್ಥಾನದಲ್ಲಿ:

ಎ 6ರಂದು ಬೆಳಿಗ್ಗೆಯಿಂದ ಸಂಜೆ ತನತ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಹಿಂದುಳಿದ ಮತ್ತು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆವಹಿಸಲಿದ್ದಾರೆ. ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪುತ್ತೂರು ತಾಲೂಕು ಒಕ್ಕಳಿಗ ಗೌಡ ಸಂಘದ ಗೌರವಾಧ್ಯಕ್ಷ ಮೋಹನ ಗೌಡ ಇಡ್ಯಡ್ಕ, ಸವಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಚಾರ್ವಾಕ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಸರ್ವೆ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಸಾದ್ ರೈ ಸೊರಕೆ, ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದು, ರಾತ್ರಿ ಮನೋರಂಜನಾ ಕಾರ್ಯಕ್ರಮದಲ್ಲಿ ನಮ್ಮ ಕಲಾವಿದರು ಬೆದ್ರ ಇವರಿಂದ ಪಾಂಡುನ ಅಲಕ್ಕಪೋಂಡು ತುಳು ನಾಟಕ ನಡೆಯಲಿದೆ.

LEAVE A REPLY

Please enter your comment!
Please enter your name here