ಕಾಣಿಯೂರು ಬಿಜೆಪಿ ಬೂತ್ ಸಂಖ್ಯೆ 83ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

0

ಕಾಣಿಯೂರು : ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನಾಚರಣೆಯನ್ನು ಕಾಣಿಯೂರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸುಂದರ ಬೆದ್ರಾಜೆಯವರ ಮನೆಯಲ್ಲಿ ಆಚರಿಸಲಾಯಿತು.

 

ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು ಪಕ್ಷದ ಬೆಳವಣಿಗೆಯ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಸಹಕಾರ ಪ್ರಕೋಷ್ಟದ ಸಹಸಂಚಾಲಕರಾದ ಧರ್ಮೇಂದ್ರ ಕಟ್ಟತ್ತಾರು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷಮುರಳೀಧರ ಪುಣ್ಚತ್ತಾರು, ಕಾಣಿಯೂರು ಬಿಜೆಪಿ ಶಕ್ತಿಕೇಂದ್ರ ಸಹ ಪ್ರಮುಖರಾದ ಸುರೇಶ್ ಓಡಬಾಯಿ, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ಪ್ರಮುಖರಾದ ಲಕ್ಷ್ಮಣ ಗೌಡ ಮುಗರಂಜ, ಪುಟ್ಟಣ್ಣ ಗೌಡ ಮುಗರಂಜ ಉಪಸ್ಥಿತರಿದ್ದರು. ಬೂತ್ ಸಮಿತಿ ಅಧ್ಯಕ್ಷರಾದ ಸುಂದರ ಬೆದ್ರಾಜೆ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಮೀಜೆ ವಂದಿಸಿದರು.

LEAVE A REPLY

Please enter your comment!
Please enter your name here