ಪುತ್ತೂರು ಬಿಜೆಪಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

0

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

 

 


ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ನಗರಸಭಾ ಅಧ್ಯಕ್ಷ ಕೆ.ಜೀವಂಧರ್ ಜೈನ್ ಸಂದರ್ಭೋಚಿತವಾಗಿ ಮಾತನಾಡಿದರು. ಸಭೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಮಂಡಲದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ರೋಟರಿ ಟ್ರಸ್ಟ್ ಹಾಲ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಿಜೆಪಿ ಸ್ಥಾಪನಾ ದಿನದ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆ  ಮಾಡಲಾಯಿತು.

LEAVE A REPLY

Please enter your comment!
Please enter your name here